ಕರ್ನಾಟಕ

karnataka

ETV Bharat / state

ಸಫಾಯಿ ಕರ್ಮಚಾರಿಗಳಿಂದ ಫ್ರೀಡಂ ಪಾರ್ಕ್​ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

ನೇರ ನೇಮಕಾತಿ ಸೇರಿದಂತೆ ಸುರಕ್ಷತಾ ಕವಚಗಳು, ನಿವೃತ್ತಿ ಸೇವಾ ಸೌಲಭ್ಯಗಳು ಮತ್ತು ಇತರ ಕಲ್ಯಾಣ ಸೌಲಭ್ಯಗಳನ್ನು ನೀಡುವಂತೆ ಆಗ್ರಹಿಸಿ ಪೌರ ಕಾರ್ಮಿಕರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ
ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

By

Published : Jul 1, 2022, 8:19 PM IST

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಸ್ವಚ್ಛತಾ ಕಾರ್ಮಿಕರ ಮುಷ್ಕರದಿಂದಾಗಿ ನಗರದಲ್ಲಿ ತ್ಯಾಜ್ಯ ಸಮಸ್ಯೆ ಉಲ್ಬಣಿಸಿದೆ. ರಾಜ್ಯ ಸರ್ಕಾರದ ಪರವಾಗಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದರು.


ಕೆಲಸ ಖಾಯಂ ಮಾಡುವುದು ಪೌರಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ. ಸಫಾಯಿ ಕರ್ಮಾಚಾರಿ, ಸ್ವೀಪರ್ ಸೇರಿದಂತೆ ಪೌರಕಾರ್ಮಿಕರಿಗೆ ಮಾಸಿಕ ಸುಮಾರು 14,000 ರೂ. ಅಲ್ಪ ವೇತನ ನೀಡಲಾಗುತ್ತಿದೆ. ಇದರಿಂದ ಮೂಲ ಅಗತ್ಯಗಳನ್ನು ಈಡೇರಿಸುವುದೇ ದುಸ್ತರವಾಗಿ ಪರಿಣಮಿಸಿದೆ. ಹೀಗಾಗಿ, ನೇರ ನೇಮಕಾತಿ ಮಾಡಬೇಕೆಂಬುದು ಪೌರಕಾರ್ಮಿಕ ಒಕ್ಕೂಟ ಬೇಡಿಕೆಯಿಟ್ಟಿದ್ದಾರೆ.

ಮಾರ್ಚ್ 2017ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗ ಸಂಪುಟ ಸಭೆಯಲ್ಲಿ ಪೌರಕಾರ್ಮಿರನ್ನು ಖಾಯಂಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರವೇ ಪ್ರಸ್ತಾವನೆಯನ್ನು ಅನುಷ್ಠಾನಗೊಳಿಸಲು ವಿಫಲವಾಯಿತು. ಬಳಿಕ ಬಂದ ಸರ್ಕಾರಗಳು ಈ ನಿಟ್ಟಿನಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವ ಗೋಜಿಗೆ ಹೋಗಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಖಾಯಂ ಕಾರ್ಮಿಕರಿಗೆ 40 ರಿಂದ 45 ಸಾವಿರ ವೇತನ:ಖಾಯಂ ಕಾರ್ಮಿಕರು ಮಾಸಿಕ 40 ರಿಂದ 45 ಸಾವಿರ ವೇತನ ಪಡೆಯುತ್ತಿದ್ದಾರೆ. ಗುತ್ತಿಗೆ ಪೌರಕಾರ್ಮಿಕರು ಕೇವಲ 14,000 ರೂ. ಪಡೆಯುತ್ತಿದ್ದಾರೆ. ಕನಿಷ್ಟ 17,000 ಪೌರಕಾರ್ಮಿಕರನ್ನು ಖಾಯಮಾತಿ ಮಾಡಬೇಕೆಂಬುದು ಪ್ರತಿಭಟನಾಕಾರರು ಕೇಳುತ್ತಿದ್ದಾರೆ.

ಶಿವಮೊಗ್ಗ:ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಯಲ್ಲಿ ನೇರ ನೇಮಕಾತಿಯಲ್ಲಿ ಕೆಲಸ ನಿರ್ವಹಿಸುತ್ತಿರುವವರನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿ ನೇರ ನೇಮಪಾವತಿ ಪೌರ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಇಂದಿನಿಂದ ನೇರಪಾವತಿ ನೌಕರರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ.

ಇದನ್ನೂಓದಿ:ಸೇವಾ ನಿವೃತ್ತಿಯ ದಿನವೇ ಕೊಲೆಯಾದ ಮೈಸೂರು ವಿವಿ ನೌಕರ

For All Latest Updates

TAGGED:

ABOUT THE AUTHOR

...view details