ಕರ್ನಾಟಕ

karnataka

ETV Bharat / state

ಮರಾಠಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾಯಣ್ಣ ವಿರೋಧ - kannada sahitya parishad

ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರದ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಮರಾಠಿ ಪ್ರಾಧಿಕಾರದ ಬದಲು ಕನ್ನಡ ಭಾಷೆಯ ಅಭಿವೃದ್ಧಿಗೆ ಒತ್ತು ನೀಡುವಂತೆ ಆಗ್ರಹಗಳು ಕೇಳಿ ಬರುತ್ತಿವೆ.

Mayanna is the president of Kannada Sahitya Parishad
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾಯಣ್ಣ

By

Published : Nov 16, 2020, 1:52 PM IST

ಬೆಂಗಳೂರು: ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚನೆಯ ನಿರ್ಧಾರದ ವಿರುದ್ಧ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಸರ್ಕಾರ ಮಾಡಿರುವ ಮರಾಠಿ ಅಭಿವೃದ್ಧಿ ಪ್ರಾಧಿಕಾರವನ್ನ ಕೂಡಲೇ ರದ್ದು ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾಯಣ್ಣ ಆಗ್ರಹಿಸಿದ್ದಾರೆ‌.

ಮರಾಠಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾಯಣ್ಣ ತೀವ್ರ ವಿರೋಧ

ಕೇವಲ ವೋಟ್ ಬ್ಯಾಂಕ್​​​​ಗಾಗಿ ಪ್ರಾಧಿಕಾರ ರಚಿಸದರೆ ಕನ್ನಡಿಗರ ಪಾಡೇನು, ಭಾಷೆಗೊಂದು ಪ್ರಾಧಿಕಾರ ರಚನೆ ಮಾಡೋದು ಸರಿಯಲ್ಲ. ಸರ್ಕಾರಕ್ಕೆ ಅಷ್ಟೊಂದು ಪ್ರೀತಿ ಕಾಳಜಿ ಇದ್ದರೆ ಕನ್ನಡಿಗರನ್ನು ರಕ್ಷಣೆ ಮಾಡಿ. ಮೊದಲು ಮಹಾರಾಷ್ಟ್ರ ಹಾಗೂ ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಆಗುತ್ತಿರುವ ದೌರ್ಬನ್ಯ ನಿಲ್ಲಿಸಿ ಎಂದು ಒತ್ತಾಯಿಸಿದರು.

ಜೊತೆಗೆ ಕನ್ನಡ ಪ್ರಾಧಿಕಾರ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಅಭಿವೃದ್ಧಿಪಡಿಸಿ, ಅದನ್ನು ಬಿಟ್ಟು ಮರಾಠಿಗಳ ಓಲೈಕೆಗೆ ಮರಾಠಿ ಅಭಿವೃದ್ಧಿ ಪ್ರಾಧಿಕಾರ ಮಾಡಿರೋದು ಸರಿಯಲ್ಲ. ಕೂಡಲೇ ಪ್ರಾಧಿಕಾರ ರದ್ದು ಮಾಡಬೇಕೆಂದು ಕನ್ನಡ ಪರಿಷತ್ ಅಧ್ಯಕ್ಷ ಮಾಯಣ್ಣ ಆಗ್ರಹಿಸಿದ್ದಾರೆ.

ABOUT THE AUTHOR

...view details