ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿರುವ ಬೆನ್ನಲ್ಲೇ, ಗೆಸ್ಟ್ ಲೆಕ್ಚರ್ಸ್ ಆಗಲು ರಾಜ್ಯ ಸರ್ಕಾರಕ್ಕೆ ಪದವೀಧರರ ಅರ್ಜಿಗಳ ಮಹಾಪೂರವೇ ಹರಿದು ಬರತೊಡಗಿದೆ.
ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ರಾಜ್ಯ ಸರ್ಕಾರ ಆರಂಭಿಸಿರುವ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಗೆ ಭಾರೀ ಸ್ಪಂದನೆ ವ್ಯಕ್ತವಾಗಿದೆ. ಸಹಸ್ರಾರು ಸಂಖ್ಯೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದಾರೆ.
ಇದನ್ನೂ ಓದಿ: ಸಚಿವ ಸ್ಥಾನದ ಆಕಾಂಕ್ಷಿಗಳಿಂದ ಸಿಎಂ ನಿವಾಸಕ್ಕೆ ಪರೇಡ್: ಯೋಗಕ್ಷೇಮ ವಿಚಾರಿಸೋ ನೆಪದಲ್ಲಿ ಲಾಭಿ ನಡೆಸಿದ ಶಾಸಕರು
ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಿದೆ. ಗುರುವಾರದವರೆಗೆ ಸುಮಾರು 3 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಅತಿಥಿ ಉಪನ್ಯಾಸಕರಾಗಲು ಆಸಕ್ತಿ ವ್ಯಕ್ತಪಡಿಸಿ, ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನ್ ಲೈನ್ನಲ್ಲಿ ಅರ್ಜಿ ಸಲ್ಲಿಸಲು ಇದೇ ಶುಕ್ರವಾರ ರಾತ್ರಿ 12 ಗಂಟೆಯವರೆಗೆ ಮಾತ್ರ ಅವಕಾಶವಿದೆ. ಇದುವರೆಗೂ ಅರ್ಜಿ ಸಲ್ಲಿಸದಿರುವ ಅಭ್ಯರ್ಥಿಗಳು https://dec.karnataka/gov.in ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ.
ಜಾಹೀರಾತು:ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ