ಕರ್ನಾಟಕ

karnataka

ETV Bharat / state

ಡ್ರಗ್ಸ್ ಮಾರಾಟ : ನೈಜಿರಿಯಾ ಪ್ರಜೆ‌ ಸೇರಿ ನಾಲ್ವರ ಬಂಧನ

ರಾಜಧಾನಿಯಲ್ಲಿ ಡ್ರಗ್ಸ್ ಖರೀದಿಸಿ ಚೆನ್ನೈನಲ್ಲಿ ಪ್ರತಿಷ್ಟಿತ ಕಾಲೇಜು ವಿದ್ಯಾರ್ಥಿಗಳಿಗೆ, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್​​ಗಳಿಗೆ ಪೂರೈಕೆ ಮಾಡುತ್ತಿದ್ದರು‌. ನಾಲ್ವರು ಆರೋಪಿಗಳು ತಮಿಳುನಾಡು, ಕೇರಳ ಹಾಗೂ ಕರ್ನಾಟಕ ಭಾಗದಲ್ಲಿ ನಿರಂತರವಾಗಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ..

Sale of Drugs
ಡ್ರಗ್ಸ್ ಮಾರಾಟ

By

Published : Jan 19, 2022, 3:17 PM IST

ಬೆಂಗಳೂರು :ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ಡ್ರಗ್ಸ್ ಜಾಲದಲ್ಲಿ ತೊಡಗಿದ್ದ ಓರ್ವ ನೈಜಿರಿಯಾ ಪ್ರಜೆ ಸೇರಿ ನಾಲ್ವರು ಆರೋಪಿಗಳನ್ನು ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ದಳ (ಎನ್​ಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.

ಲಕ್ಷಾಂತರ ರೂಪಾಯಿ ಮೌಲ್ಯದ 40 ಗ್ರಾಂ ಎಂಡಿಎಂಎ, 84 ಗ್ರಾಂ ಕೊಕೈನ್, ಹ್ಯಾಶ್ ಆಯಿಲ್ ಹಾಗೂ ಗಾಂಜಾ ವಶಕ್ಕೆ ಪಡೆಯಲಾಗಿದೆ‌. ಹಲವು ವರ್ಷಗಳಿಂದ‌ ಡ್ರಗ್ಸ್ ಜಾಲದಲ್ಲಿ ತೊಡಗಿದ್ದ ಆರೋಪಿಗಳು, ಜನವರಿ 17ರಂದು ಬೆಂಗಳೂರಿನಲ್ಲಿ‌ ಡ್ರಗ್ಸ್ ಖರೀದಿಸಿ ತಮಿಳುನಾಡಿಗೆ ಹೋಗುತ್ತಿರುವ ಬಗ್ಗೆ ಬೆಂಗಳೂರು ಉಪವಿಭಾಗದ ಎನ್​​ಸಿಬಿ ಅಧಿಕಾರಿಗಳಿಗೆ ಮಾಹಿತಿ ದೊರೆತಿದೆ. ಬಳಿಕ ಕಾರ್ಯಪ್ರವೃತ್ತಗೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ಚಿಯಾಗಿದ್ದಾರೆ.

ಇದನ್ನೂ ಓದಿ: ವಾರಾಂತ್ಯ, ನೈಟ್ ಕರ್ಫ್ಯೂ.. ಸರ್ಕಾರದ ನಿರ್ಧಾರಕ್ಕೆ ಸ್ವಪಪಕ್ಷಿಯರು ಸೇರಿ ಕೈ, ಜೆಡಿಎಸ್​ ನಾಯಕರ ಆಕ್ಷೇಪ

ರಾಜಧಾನಿಯಲ್ಲಿ ಡ್ರಗ್ಸ್ ಖರೀದಿಸಿ ಚೆನ್ನೈನಲ್ಲಿ ಪ್ರತಿಷ್ಟಿತ ಕಾಲೇಜು ವಿದ್ಯಾರ್ಥಿಗಳಿಗೆ, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್​​ಗಳಿಗೆ ಪೂರೈಕೆ ಮಾಡುತ್ತಿದ್ದರು‌. ನಾಲ್ವರು ಆರೋಪಿಗಳು ತಮಿಳುನಾಡು, ಕೇರಳ ಹಾಗೂ ಕರ್ನಾಟಕ ಭಾಗದಲ್ಲಿ ನಿರಂತರವಾಗಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details