ಕರ್ನಾಟಕ

karnataka

ETV Bharat / state

ಮಾದಕ ವಸ್ತುಗಳ ಮಾರಾಟ.. ಮೂವರು ವಿದೇಶಿ ಪ್ರಜೆಗಳ ಬಂಧನ - ಮೂವರು ವಿದೇಶಿ ಪ್ರಜೆಗಳ ಬಂಧನ,

ಕೆಜಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗವಾರ ಬಳಿಯ ಹೌಸಿಂಗ್ ಸೊಸೈಟಿ ಲೇಔಟ್​ನ ಇಂದಿರಾ ಕ್ಯಾಂಟೀನ್ ಬಳಿ ಮಾದಕ ವಸ್ತುಗಳನ್ನು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಗಳನ್ನು ಬಂಧಿಸುವಲ್ಲಿ ಪೂರ್ವ ವಿಭಾಗದ ಕೆಜಿಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

police arrest three foreigners, ಮೂವರು ವಿದೇಶಿ ಪ್ರಜೆಗಳ ಬಂಧನ

By

Published : Nov 18, 2019, 4:20 PM IST

ಬೆಂಗಳೂರು : ಮಾದಕ ವಸ್ತುಗಳನ್ನ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಗಳನ್ನು ಬಂಧಿಸುವಲ್ಲಿ ಪೂರ್ವ ವಿಭಾಗದ ಕೆಜಿಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೌತ್ ಸೂಡನ್ ಪ್ರಜೆಗಳಾದ ಅಡ್ವಕ್ ಸ್ಟೆಪನ್, ಡಾವೊಡ್, ಅನಿಲ್ ಬಂಧಿತ ಆರೋಪಿಗಳು. ಇವರು ಕೆಜಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗವಾರ ಬಳಿಯ ಹೌಸಿಂಗ್ ಸೊಸೈಟಿ ಲೇಔಟ್​ನ ಇಂದಿರಾ ಕ್ಯಾಂಟೀನ್ ಬಳಿ ಮಾದಕ ವಸ್ತುಗಳನ್ನು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ಮಾರಾಟ ಮಾಡುತ್ತಿದ್ದರು.

ಈ ಕುರಿತು ಮಾಹಿತಿ ಪಡೆದ ಕೆಜಿಹಳ್ಳಿ ಪೊಲೀಸ್ ಠಾಣಾ ಪೊಲೀಸರು ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳಿಂದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ವೀಸಾ ಅವಧಿ ಮುಗಿದಿದ್ದರೂ ಅನಧಿಕೃತವಾಗಿ ನೆಲೆಸಿ ಗಾಂಜಾ ಮಾರಾಟ ಮಾಡಿ ಹಣ ಸಂಗ್ರಹಿಸುತ್ತಿದ್ದರು ಎಂಬ ಮಾಹಿತಿ ತನಿಖೆಯಿಂದ ತಿಳಿದು ಬಂದಿದೆ.

ABOUT THE AUTHOR

...view details