ಕರ್ನಾಟಕ

karnataka

ETV Bharat / state

ವಿದ್ಯುತ್ ಬೆಲೆ ಏರಿಕೆ ವಿರುದ್ಧ ಜಿಲ್ಲಾ, ತಾಲೂಕು ಮಟ್ಟದಲ್ಲಿ ಪ್ರತಿಭಟಿಸಲು ಕೈ ಕಾರ್ಯಕರ್ತರಿಗೆ ಸಲೀಂ ಅಹ್ಮದ್ ಕರೆ

ಪಕ್ಷದ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಉಪಯೋಗಿಸಿಕೊಳ್ಳಬೇಕು. ಅವರ ಮುಖಾಂತರ ಈ ಪ್ರತಿಭಟನೆಯಲ್ಲಿ ಜನರು ವಿದ್ಯುತ್ ಸಮಸ್ಯೆಗಳಿಂದ ಅನುಭವಿಸುತ್ತಿರುವ ಬವಣೆಗಳ ಕುರಿತು ಹೆಚ್ಚು ಹೆಚ್ಚು ವಿಡಿಯೋಗಳನ್ನು ಪ್ರದರ್ಶಿಸಬೇಕು. ಪ್ರತಿಭಟನೆಯನ್ನ ಪರಿಣಾಮಕಾರಿ ಹಾಗೂ ಯಶಸ್ವಿಯಾಗಿ ಸಂಘಟಿಸಿ, ಇದರ ಬಗ್ಗೆ ವರದಿ ಭಾವಚಿತ್ರ, ವಿಡಿಯೋ ತುಣುಕುಗಳನ್ನು ಕೆಪಿಸಿಸಿಗೆ ಕಳುಹಿಸಿಕೊಡಬೇಕು..

Salim Ahmed
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್

By

Published : Nov 10, 2020, 10:39 PM IST

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿದ್ಯುತ್ ದರ ಏರಿಕೆ ಬರೆ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಪಕ್ಷದ ಮುಖಂಡರಿಗೆ ಕರೆ ಕೊಟ್ಟಿದ್ದಾರೆ.

ವಿದ್ಯುತ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಭಟನೆಗೆ ಸಲೀಂ ಅಹ್ಮದ್ ಕರೆ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೂಚನೆ ಮೇರೆಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರವು ರಾಜ್ಯದಲ್ಲಿನ ಎಲ್ಲಾ ವಿದ್ಯುತ್ ಕಂಪನಿಗಳ ವಿದ್ಯುತ್ ದರವನ್ನು ಸರಾಸರಿ 5.4ರಂತೆ ಪ್ರತೀ ಯೂನಿಟ್‌ಗೆ 40 ಪೈಸೆ ಹೆಚ್ಚಳ ಮಾಡಿರುವುದು ಕೋವಿಡ್-19 ಸಂಕಷ್ಟದ ಸಮಯದಲ್ಲಿ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿರುತ್ತದೆ.

ರಾಜ್ಯ ಬಿಜೆಪಿ ಸರ್ಕಾರವು ನಿರಂತರವಾಗಿ ದಿನ ಬಳಕೆ ಮತ್ತು ಇತರ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಸುತ್ತಾ ಜನರಿಗೆ ಆಘಾತದ ಮೇಲೆ ಆಘಾತಗಳನ್ನು ನೀಡುತ್ತಿದೆ. ಜನರಲ್ಲಿ ಆತಂಕ ನಿರ್ಮಾಣ ಮಾಡಿದೆ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷವು ರಾಜ್ಯಾದ್ಯಂತ "ಪ್ರತಿಭಟನೆ” ಹಮ್ಮಿಕೊಳ್ಳಲು ನಿರ್ಧರಿಸಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನ.17ರಿಂದ 20ರವರೆಗೆ ಯಾವುದಾದರೊಂದು ದಿನ ಹಾಗೂ ನ. 23ರಿಂದ 28ರವರೆಗೆ ಯಾವುದಾದರೊಂದು ದಿನ ಪ್ರತಿ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಆಯೋಜಿಸಬೇಕು ಎಂದು ಸೂಚಿಸಿದ್ದಾರೆ.

ಈ ಪ್ರತಿಭಟನಾ ಕಾರ್ಯಕ್ರಮಗಳಲ್ಲಿ ಜಿಲ್ಲೆಗೆ ಹಾಗೂ ತಾಲೂಕು/ಬ್ಲಾಕ್‌ಗಳಿಗೆ ಸಂಬಂಧಿತ ಎಲ್ಲಾ ಸಂಸದರು, ಶಾಸಕರು, 2018ರ ವಿಧಾನಸಭಾ ಮತ್ತು 2019ರ ಲೋಕಸಭಾ ಅಭ್ಯರ್ಥಿಗಳು, ಬ್ಲಾಕ್/ತಾಲೂಕು ಮಟ್ಟದ ಎಲ್ಲಾ ಪಕ್ಷದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತಪ್ಪದೇ ಭಾಗವಹಿಸಬೇಕು. ಯಶಸ್ವಿ ಪ್ರತಿಭಟನಾ ಕಾರ್ಯಕ್ರಮದ ನಂತರ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ಹಾಗೂ ತಾಲೂಕು ಮಟ್ಟದಲ್ಲಿ ತಹಶೀಲ್ದಾರರನ್ನು ಭೇಟಿಮಾಡಿ ಅವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು ಎಂದಿದ್ದಾರೆ.

ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ಪ್ರತಿಭಟನೆ ನಡೆಸುವಾಗ ಪಕ್ಷದ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಉಪಯೋಗಿಸಿಕೊಳ್ಳಬೇಕು. ಅವರ ಮುಖಾಂತರ ಈ ಪ್ರತಿಭಟನೆಯಲ್ಲಿ ಜನರು ವಿದ್ಯುತ್ ಸಮಸ್ಯೆಗಳಿಂದ ಅನುಭವಿಸುತ್ತಿರುವ ಬವಣೆಗಳ ಕುರಿತು ಹೆಚ್ಚು ಹೆಚ್ಚು ವಿಡಿಯೋಗಳನ್ನು ಪ್ರದರ್ಶಿಸಬೇಕು. ಪ್ರತಿಭಟನೆಯನ್ನು ಪರಿಣಾಮಕಾರಿ ಹಾಗೂ ಯಶಸ್ವಿಯಾಗಿ ಸಂಘಟಿಸಿ, ಇದರ ಬಗ್ಗೆ ವರದಿ ಭಾವಚಿತ್ರ, ವಿಡಿಯೋ ತುಣುಕುಗಳನ್ನು ಕೆಪಿಸಿಸಿಗೆ ಕಳುಹಿಸಿಕೊಡಬೇಕಾಗಿ ತಮಗೆ ಸೂಚಿಸುತ್ತಿದ್ದೇನೆ ಎಂದಿದ್ದಾರೆ.

ABOUT THE AUTHOR

...view details