ಬೆಂಗಳೂರು: ಜನಪರ ಚಳವಳಿಗಳಲ್ಲಿ ಭಾಗಿಯಾದವರ ವಿರುದ್ಧ ದಾಖಲಾದ ಪ್ರಕರಣ ಹಿಂಪಡೆಯುವ ನೆಪದಲ್ಲಿ ತಮ್ಮವರ ರಕ್ಷಣೆಗೆ ಬಿಜೆಪಿ ಮುಂದಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಆರೋಪಿಸಿದ್ದಾರೆ.
ಪ್ರಕರಣ ಹಿಂಪಡೆಯುವ ನೆಪದಲ್ಲಿ ತಮ್ಮವರ ರಕ್ಷಣೆಗೆ ಬಿಜೆಪಿ ಮುಂದಾಗಿದೆ: ಸಲೀಂ ಅಹಮದ್ ಆರೋಪ - salim ahmed tweet about bjp
ಬಿಜೆಪಿ ಸರ್ಕಾರವು ಜನಪರ ಚಳವಳಿಗಳನ್ನು ಮಾಡುವವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡುವ ನೆಪದಲ್ಲಿ ತನ್ನ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಮೇಲಿನ ಕ್ರಿಮಿನಲ್ ಮೊಕದ್ದಮೆಗಳನ್ನು ವಾಪಸ್ ಪಡೆಯುವ ಮೂಲಕ ಮತ್ತಷ್ಟು ಹಿಂಸೆ ಹಾಗೂ ಗಲಭೆ ಮಾಡಲು ಪ್ರೋತ್ಸಾಹ ನೀಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಟ್ವೀಟ್ ಮಾಡಿದ್ದಾರೆ.
ಕಾಮಗಾರಿ ಸಂಬಂಧ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರವು ಜನಪರ ಚಳವಳಿಗಳನ್ನು ಮಾಡುವವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡುವ ನೆಪದಲ್ಲಿ ತನ್ನ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಮೇಲಿನ ಕ್ರಿಮಿನಲ್ ಮೊಕದ್ದಮೆಗಳನ್ನು ವಾಪಸ್ ಪಡೆಯುವ ಮೂಲಕ ಮತ್ತಷ್ಟು ಹಿಂಸೆ ಹಾಗೂ ಗಲಭೆ ಮಾಡಲು ಪ್ರೋತ್ಸಾಹ ನೀಡಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ವಿವಿಧ ವಿಚಾರಗಳ ಮೇಲೆ ನಿರಂತರವಾಗಿ ಆರೋಪ ಮಾಡುತ್ತಾ ಬಂದಿದ್ದು, ಇದೀಗ ಹೊಸದೊಂದು ವಿಚಾರವನ್ನು ಕೈಗೆತ್ತಿಕೊಂಡು ಸಲೀಂ ಅಹಮದ್ ಆರೋಪ ಮಾಡಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಯಾವ ರೀತಿಯ ಪ್ರತಿಕ್ರಿಯೆ ನೀಡಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.