ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿರುವ ಬಗ್ಗೆ ಸಿಸಿಬಿ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿ ಆರೋಪಿ ಬಂಧಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಶೀಘ್ರದಲ್ಲೇ ಸಂಪತ್ ರಾಜ್ ಬಂಧನ: ಗೃಹ ಸಚಿವ ಬೊಮ್ಮಾಯಿ - ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ
ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ತಲೆಮರೆಸಿಕೊಂಡಿದ್ದು, ಅತಿ ಶೀಘ್ರದಲ್ಲಿ ಆರೋಪಿಯನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಡಿಜೆ ಹಳ್ಳಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಪತ್ ರಾಜ್, ಖಾಸಗಿ ಆಸ್ಪತ್ರೆಯಿಂದ ತಲೆಮರೆಸಿಕೊಂಡಿದ್ದಾರೆ. ಆರೋಪಿ ಶೋಧಕ್ಕಾಗಿ ಸಿಸಿಬಿ ಅಧಿಕಾರಿಗಳ ವಿಶೇಷ ತಂಡವೊಂದನ್ನ ರಚನೆ ಮಾಡಲಾಗಿದ್ದು, ಆದಷ್ಟು ಬೇಗ ಆರೋಪಿ ಬಂಧಿಸಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ಅತ್ಯಂತ ಗಂಭೀರವಾಗಿದ್ದರಿಂದ ತನಿಖಾ ಹಂತದಲ್ಲಿ ಸಂಪತ್ ರಾಜ್ ನಾಪತ್ತೆಯಾಗಿರುವ ಬಗ್ಗೆ ಆಸ್ಪತ್ರೆ ಸಿಬ್ಬಂದಿಯನ್ನೂ ಸಹ ವಿಚಾರಣೆಗೆ ಒಳಪಡಿಸಲಾಗಿದೆ. ಸಂಪತ್ ರಾಜ್ ಶೋಧಕ್ಕಾಗಿ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದ್ದು, ಶೀಘ್ರವಾಗಿ ಆತನನ್ನು ಸೆರೆಹಿಡಿಯಲಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.