ಕರ್ನಾಟಕ

karnataka

ETV Bharat / state

ಜುಲೈ 5ರಿಂದ ಸಂವೇದಾ ತರಗತಿಗಳ ಆರಂಭ: ಶಿಕ್ಷಣ ಸಚಿವ ಸುರೇಶ್ ಕುಮಾರ್ - ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿ

ರಾಜ್ಯದ ಎಲ್ಲ ಶಿಕ್ಷಕರು ಸದರಿ ವೇಳಾಪಟ್ಟಿಯನ್ನು ತಮ್ಮ ಶಾಲೆಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ತಲುಪಿಸಿ ಅವರೊಂದಿಗೆ ಸಮನ್ವಯ ಸಾಧಿಸಿ ನಿಗದಿತ ಸಮಯದಲ್ಲಿ ನಿಗದಿತ ತರಗತಿಯ ವಿದ್ಯಾರ್ಥಿಗಳು ಸಂವೇದಾ ತರಗತಿಗಳನ್ನು ವೀಕ್ಷಿಸುವಂತೆ ಕ್ರಮ ಕೈಗೊಂಡು ನಂತರ ಪ್ರತಿಯೊಬ್ಬ ವಿದ್ಯಾರ್ಥಿಯ ಮೌಲ್ಯಮಾಪನ ವಿವರಗಳನ್ನು ನಿರ್ವಹಿಸಲಿದ್ದಾರೆಂದು ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

suresh-kumar
ಶಿಕ್ಷಣ ಸಚಿವ ಸುರೇಶ್ ಕುಮಾರ್

By

Published : Jun 30, 2021, 8:45 PM IST

Updated : Jun 30, 2021, 9:02 PM IST

ಬೆಂಗಳೂರು:ಕೋವಿಡ್-19ರ ಸೋಂಕಿನಿಂದಾಗಿ 2021-22ನೇ ಸಾಲಿನ ಭೌತಿಕ ತರಗತಿಗಳು ಆರಂಭ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ದೂರದರ್ಶನ ಚಂದನ ವಾಹಿನಿಯಲ್ಲಿ ಜೂನ್ 5ರಿಂದ ಸಂವೇದಾ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮಗಳು ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದ ಎಲ್ಲ ಶಿಕ್ಷಕರು ಸದರಿ ವೇಳಾಪಟ್ಟಿಯನ್ನು ತಮ್ಮ ಶಾಲೆಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ತಲುಪಿಸಿ ಅವರೊಂದಿಗೆ ಸಮನ್ವಯ ಸಾಧಿಸಿ ನಿಗದಿತ ಸಮಯದಲ್ಲಿ ನಿಗದಿತ ತರಗತಿಯ ವಿದ್ಯಾರ್ಥಿಗಳು ಸಂವೇದಾ ತರಗತಿಗಳನ್ನು ವೀಕ್ಷಿಸುವಂತೆ ಕ್ರಮ ಕೈಗೊಂಡು ನಂತರ ಪ್ರತಿಯೊಬ್ಬ ವಿದ್ಯಾರ್ಥಿಯ ಮೌಲ್ಯಮಾಪನ ವಿವರಗಳನ್ನು ನಿರ್ವಹಿಸಲಿದ್ದಾರೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾವುದೇ ವಿದ್ಯಾರ್ಥಿಗೆ ದೂರದರ್ಶನ ವೀಕ್ಷಿಸಲು ಅವಕಾಶದ ಕೊರತೆಯಿದ್ದಲ್ಲಿ ಆಯಾ ಶಾಲೆಯ ಶಿಕ್ಷಕರು ಎಸ್‍ಡಿಎಂಸಿ ಸದಸ್ಯರ ನೆರವು ಪಡೆದು ವಿದ್ಯಾರ್ಥಿಗೆ ದೂರದರ್ಶನ ವೀಕ್ಷಿಸಲು ಅನುಕೂಲ ಮಾಡುವುದು ಮತ್ತು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಕಲಿಕೆಯನ್ನು ಪರಿಣಾಮಕಾರಿಗೊಳಿಸಬೇಕೆಂದು ಕಲ್ಪಿಸಬೇಕೆಂದು ಅವರು ತಿಳಿಸಿದ್ದಾರೆ.

1ರಿಂದ 7ನೇ ತರಗತಿಗಳಿಗೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಮತ್ತು 8ರಿಂದ 10ನೇ ತರಗತಿವರೆಗೆ ಬೆಳಗ್ಗೆ 8ರಿಂದ ಸಂಜೆ 4.30ರವರೆಗೆ ನಡೆಯಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಕ್ಕಳು ಸಂವೇದಾ ತರಗತಿಗಳ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಚಿವ ಸುರೇಶ್ ಕುಮಾರ್ ಕೋರಿದ್ದಾರೆ.‌

Last Updated : Jun 30, 2021, 9:02 PM IST

ABOUT THE AUTHOR

...view details