ಬೆಂಗಳೂರು: ಅಂಗಾಂಗ ದಾನದ ಮೂಲಕ ನಟ ಸಂಚಾರಿ ವಿಜಯ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಪೊಲೀಸ್ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಪೊಲೀಸ್ ಗೌರವಗಳೊಂದಿಗೆ ಸಂಚಾರಿ ವಿಜಯ್ ಅಂತ್ಯಕ್ರಿಯೆ: ಸಿಎಂ ಬಿಎಸ್ವೈ - ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್
ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜೊತೆಗೆ ಸಂತಾಪ ಸೂಚಿಸುತ್ತಾ, ಪ್ರತಿಭಾವಂತ ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
'ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು. ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜೊತೆಗೆ ಸಂತಾಪ ಸೂಚಿಸುತ್ತಾ, ಪ್ರತಿಭಾವಂತ ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ತಿಳಿಸಿದ್ದಾರೆ.