ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ ಲಿಂಕ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಳ್ಳಾರಿ ಟಸ್ಕರ್ಸ್ ತಂಡದ ಮಾಲೀಕನಾಗಿದ್ದ ಉದ್ಯಮಿ ಅರವಿಂದ್ ರೆಡ್ಡಿಯನ್ನ ಸಿಸಿಬಿ ಡಿಸಿಪಿ ರವಿಕುಮಾರ್ ವಿಚಾರಣೆ ನಡೆಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿರುವ ಅರವಿಂದ್ ರೆಡ್ಡಿ ನಟಿ ರಾಗಿಣಿ ಜೊತೆ ಬಹಳ ಆತ್ಮೀಯರಾಗಿದ್ದರು ಎನ್ನಲಾಗ್ತಿದೆ.
ಡ್ರಗ್ಸ್ ಮಾಫಿಯಾ: ಸಿಸಿಬಿಯಿಂದ ಉದ್ಯಮಿ ಅರವಿಂದ್ ರೆಡ್ಡಿ ವಿಚಾರಣೆ - ಸಿಸಿಬಿ ಅಧಿಕಾರಿಗಳಿಂದ ಅರವಿಂದ್ ರೆಡ್ಡಿ ವಿಚಾರಣೆ
ಚಂದನವನಕ್ಕೆ ಮಾದಕವಸ್ತು ಜಾಲದ ನಂಟಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಟಸ್ಕರ್ಸ್ ತಂಡದ ಮಾಲೀಕನಾಗಿದ್ದ ಉದ್ಯಮಿ ಅರವಿಂದ್ ರೆಡ್ಡಿಯನ್ನ ಸಿಸಿಬಿ ವಿಚಾರಣೆ ನಡೆಸಿದೆ.
ಕೆಪಿಎಲ್ ಬೆಟ್ಟಿಂಗ್ ಹಗರಣದಲ್ಲೂ ಅರವಿಂದ್ ಹೆಸರು ಕೇಳಿ ಬಂದಿದ್ದು, ಸಿಸಿಬಿ ವಿಚಾರಣೆಗೆ ಒಳಪಟ್ಟಿದ್ರು. ಸದ್ಯ ಡ್ರಗ್ಸ್ ಪ್ರಕರಣದಲ್ಲೂ ಇವರ ಹೆಸರು ಕೇಳಿ ಬಂದಿರುವುದರಿಂದ ಸಿಸಿಬಿ ವಿಚಾರಣೆ ನಡೆಸಿ, ಎರಡು ಮೊಬೈಲ್ಗಳನ್ನ ವಶಕ್ಕೆ ಪಡೆಯಲಾಗಿದೆ. ಮೊಬೈಲ್ಗಳನ್ನ ರಿಟ್ರೀವ್ಗೆ ಕಳಿಸಿದ್ದು, ಮತ್ತಷ್ಟು ತನಿಖೆ ನಡೆಸಲಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ ನಟಿ ರಾಗಿಣಿ ಜೊತೆ ಕ್ರಿಕೆಟ್ ಪಂದ್ಯವಾದ ಬಳಿಕ ಮಾರತ್ ಹಳ್ಳಿಯಲ್ಲಿರೋ ಈಜೋನ್ ಕ್ಲಬ್ ನಲ್ಲಿ ಪಾರ್ಟಿ ಮಾಡಿರುವ ವಿಚಾರ ಬಯಲಾಗಿದೆ. ಹೀಗಾಗಿ ಪಾರ್ಟಿಯಲ್ಲಿ ಡ್ರಗ್ಸ್ ಸಪ್ಲೈ ಮಾಡಲಾಗಿತ್ತಾ ಅನ್ನೋದ್ರ ಬಗ್ಗೆ ಅಧಿಕಾರಿಗಳು ಪ್ರಶ್ನೆ ಕೇಳಿದ್ದಾರೆ. ಸರಿಯಾದ ಉತ್ತರ ನೀಡದ ಕಾರಣ ಮೊಬೈಲ್ ರಿಟ್ರೀವ್ ಗೆ ಕಳಿಸಲಾಗಿದ್ದು, ಅಗತ್ಯ ಬಿದ್ದರೆ ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ ಎನ್ನಲಾಗ್ತಿದೆ.