ಕರ್ನಾಟಕ

karnataka

ETV Bharat / state

ಡ್ರಗ್ಸ್ ಜಾಲ: ನಟಿಮಣಿಯರ ಕೂದಲು ಸ್ಯಾಂಪಲ್ ಸಂಗ್ರಹಕ್ಕೆ ಅನುಮತಿ ನೀಡಿದ ಕೋರ್ಟ್ - drug case updates

ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲು ಅವರ ಕೂದಲು ಸ್ಯಾಂಪಲ್ ಪಡೆದು ಪರೀಕ್ಷೆಗೆ ಒಳಪಡಿಸುವ ಅಗತ್ಯವಿದೆ. ಆದರೆ, ಆರೋಪಿತ ನಟಿಯರು ಇದಕ್ಕೆ ಸಹಕರಿಸುತ್ತಿಲ್ಲ. ಹಾಗಾಗಿ ಕೂದಲು ಸ್ಯಾಂಪಲ್ ಪಡೆಯಲು ಅನುಮತಿ ನೀಡಬೇಕು ಎಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

sandalwood drug case: court gave a permission to get hair sample from actress
ಡ್ರಗ್ಸ್ ಜಾಲ: ನಟಿಮಣಿಯರ ಕೂದಲು ಸ್ಯಾಂಪಲ್ ಸಂಗ್ರಹಕ್ಕೆ ಅನುಮತಿ ನೀಡಿದ ಕೋರ್ಟ್

By

Published : Dec 4, 2020, 6:45 PM IST

Updated : Dec 4, 2020, 7:40 PM IST

ಬೆಂಗಳೂರು: ಸ್ಯಾಂಡಲ್​​​ವುಡ್ ಡ್ರಗ್ಸ್ ಜಾಲದಲ್ಲಿ ಸಕ್ರಿಯರಾಗಿರುವ ಆರೋಪದಡಿ ಬಂಧನಕ್ಕೆ ಒಳಗಾಗಿರುವ ನಟಿ ಸಂಜನಾ ಹಾಗೂ ರಾಗಿಣಿ ಅವರ ಕೂದಲು ಸ್ಯಾಂಪಲ್ ಸಂಗ್ರಹಕ್ಕೆ ಎನ್​ಡಿಪಿಎಸ್ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

ಪ್ರಕರಣದಲ್ಲಿ ನಟಿಯರು ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂಬ ಆರೋಪ ಸಂಬಂಧ ಹೆಚ್ಚಿನ ತನಿಖೆ ನಡೆಸಲು ಅವರ ಕೂದಲು ಸ್ಯಾಂಪಲ್ ಪಡೆದು ಪರೀಕ್ಷೆಗೆ ಒಳಪಡಿಸುವ ಅಗತ್ಯವಿದೆ. ಆದರೆ, ಆರೋಪಿತ ನಟಿಯರು ಇದಕ್ಕೆ ಸಹಕರಿಸುತ್ತಿಲ್ಲ. ಹಾಗಾಗಿ ಕೂದಲು ಸ್ಯಾಂಪಲ್ ಪಡೆಯಲು ಅನುಮತಿ ನೀಡಬೇಕು ಎಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

ಈ ಸುದ್ದಿಯನ್ನೂ ಓದಿ:ಸಂಜನಾ ಜಾಮೀನು ಅರ್ಜಿ ವಿಚಾರಣೆ ಪೂರ್ಣ; ಡಿ.7ಕ್ಕೆ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಮನವಿ ಪುರಸ್ಕರಿಸಿರುವ ನಗರದ ಎನ್​ಡಿಪಿಎಸ್ ವಿಶೇಷ ನ್ಯಾಯಾಲಯ ಆರೋಪಿತ ನಟಿಯರ ಕೂದಲು ಸ್ಯಾಂಪಲ್ ಸಂಗ್ರಹಿಸಲು ತನಿಖಾಧಿಕಾರಿಗಳಿಗೆ ಅನುಮತಿ ನೀಡಿ ಆದೇಶಿಸಿದೆ.

Last Updated : Dec 4, 2020, 7:40 PM IST

ABOUT THE AUTHOR

...view details