ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಶಾಂತಿ ನಗರದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಡ್ರಗ್ಸ್ ಪ್ರಕರಣ: ಕೇರಳ ಸಿಪಿಎಂ ರಾಜ್ಯ ಕಾರ್ಯದರ್ಶಿ ಪುತ್ರ ಇಡಿ ವಿಚಾರಣೆಗೆ ಹಾಜರು - ಡ್ರಗ್ಸ್ ಪ್ರಕರಣ
ಸ್ಯಾಂಡಲ್ವುಡ್ಗೆ ಡ್ರಗ್ ನಂಟಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.
ಇಡಿ ವಿಚಾರಣೆಗೆ ಬಿನೀಶ್ ಹಾಜರು
ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅನೂಪ್ ಎನ್ಸಿಬಿ ವಶದಲ್ಲಿದ್ದಾಗ ವಿಚಾರಣೆ ವೇಳೆ ಡ್ರಗ್ಸ್ ಕೇಸ್ನಲ್ಲಿ ಬಿನೀಶ್ ಪಾತ್ರದ ಬಗ್ಗೆ ಬಾಯ್ಬಿಟ್ಟಿದ್ದ ಎನ್ನಲಾಗ್ತಿದೆ. ಹೀಗಾಗಿ ಇಡಿ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ಕಮ್ಮನಹಳ್ಳಿ ಬಳಿ ಅನೂಪ್ ಹೋಟೆಲ್ ಇಟ್ಟುಕೊಂಡಿದ್ದು, ಇದಕ್ಕೆ ಬಿನೀಶ್ ಧನಸಹಾಯ ಮಾಡಿದ್ದನಂತೆ. ಈ ಹಿನ್ನೆಲೆ ಬಿನೀಶ್ ಹಾಗೂ ಅನೂಪ್ ಸ್ನೇಹದ ಬಗ್ಗೆ ಮಾಹಿತಿ ಸಂಗ್ರಹಿಸಲು ಇಡಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗ್ತಿದೆ.