ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿಗೆ ಜಾಮೀನು ಸಿಕ್ಕ ಬಳಿಕ, ಇದೇ ಮೊದಲ ಬಾರಿಗೆ ಅವರು ಸಿಸಿಬಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
ಸಿಸಿಬಿ ತನಿಖಾಧಿಕಾರಿಗಳ ಮುಂದೆ ಹಾಜರಾದ ನಟಿ ರಾಗಿ ಪ್ರತಿ 15 ದಿನಕ್ಕೊಮ್ಮೆ ಸಿಸಿಬಿ ಕಚೇರಿಗೆ ಬಂದು ಸಹಿ ಹಾಕಬೇಕು. ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ತಾಕೀತು ನೀಡಿದ ಹಿನ್ನೆಲೆ ಚಾಮರಾಜಪೇಟೆ ಸಿಸಿಬಿ ಕಚೇರಿಗೆ ಹಾಜರಾಗಿದ್ದಾರೆ.
ಓದಿ:ಜಾಮೀನು ಸಿಕ್ಕ ಮೇಲೆ ಕುಟುಂಬದ ಜೊತೆ ರಾಗಿಣಿ ಟೆಂಪಲ್ ರನ್
ನ್ಯಾಯಾಲಯದ ಸೂಚನೆ ಪ್ರಕಾರ ಇಂದು ಸಿಸಿಬಿ ಕಚೇರಿಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಸಹಿ ಹಾಕಿದ್ದೇನೆ. ಪ್ರಕರಣದ ತನಿಖೆಗೆ ಸಹಕಾರ ನೀಡುತ್ತೇನೆ. ಸದ್ಯಕ್ಕೆ ನನ್ನ ಕೆಲಸದಲ್ಲಿ ನಿರತನಾಗಿದ್ದೇನೆ. ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುತ್ತಿದ್ದೇನೆ, ಕೆಲ ದಿನಗಳ ಕಾಲ ತಾಳ್ಮೆಯಿಂದಿರಿ. ಮುಂದಿನ ದಿನಗಳಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತೇನೆ ಎಂದರು.