ಬೆಂಗಳೂರು:ರಾಧಿಕಾ ಪಂಡಿತ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಸ್ಯಾಂಡಲ್‍ವುಡ್ ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿಗೆ ಮತ್ತೊಬ್ಬರು ಸೇರ್ಪಡೆಯಾಗಿದ್ದಾರೆ. ಯಶ್ ಮನೆಗೆ ಮಿನಿ ಯಶ್ ಆಗಮನದಿಂದ ಅಭಿಮಾನಿಗಳಲ್ಲಿ ಸಂತಸ ಮೂಡಿದೆ.
ಎರಡನೇ ಮಗುವಿಗೆ ಜನ್ಮ ನೀಡಿದ ರಾಧಿಕಾ... ರಾಕಿ ಭಾಯ್ ಮನೆಗೆ ಜೂ. ಯಶ್ ಆಗಮನ! - Sandalwood star Radhika pandit child news,
ಸ್ಯಾಂಡಲ್‍ವುಡ್ ಸಿಂಡ್ರಲಾ ರಾಧಿಕಾ ಪಂಡಿತ್ ಎರಡನೇ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಕ್ಷೇಮವಾಗಿದ್ದಾರೆ.
![ಎರಡನೇ ಮಗುವಿಗೆ ಜನ್ಮ ನೀಡಿದ ರಾಧಿಕಾ... ರಾಕಿ ಭಾಯ್ ಮನೆಗೆ ಜೂ. ಯಶ್ ಆಗಮನ!](https://etvbharatimages.akamaized.net/etvbharat/prod-images/768-512-4905304-24-4905304-1572409306991.jpg)
ಐರಾ ಜೊತೆ ಯಶ್ ದಂಪತಿ
ರಾಧಿಕಾ ಪಂಡಿತ್ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದ ಮೂಲಗಳು ತಿಳಿಸಿವೆ.
ಇತ್ತೀಚೆಗೆ ರಾಧಿಕಾ ಪಂಡಿತ್ ಸೀಮಂತ ಕಾರ್ಯಕ್ರಮ ಮಾಡಿಕೊಂಡಿದ್ದರು. ಈ ಕಾರ್ಯಕ್ರಮವನ್ನು ರಾಧಿಕಾ ಸ್ನೇಹಿತರು ಆಯೋಜಿಸಿ ಅವರಿಗೆ ಸರ್ಪ್ರೈಸ್ ನೀಡಿದ್ದರು. ಡಿಸೆಂಬರ್ 9, 2016ರಂದು ಯಶ್ ಹಾಗೂ ರಾಧಿಕಾ ಪಂಡಿತ್ ಹಸೆಮಣೆ ಏರಿದ್ದರು.
Last Updated : Oct 30, 2019, 12:43 PM IST