ಕರ್ನಾಟಕ

karnataka

ETV Bharat / state

ಸರ್ವೋದಯ ದಿನಾಚರಣೆ ಪ್ರಯುಕ್ತ ಬಿಬಿಎಂಪಿಯಿಂದ ಕುಷ್ಠರೋಗ ನಿರ್ಮೂಲನ ಆಂದೋಲನ - Gandhiji

ಸರ್ವೋದಯ ದಿನಾಚರಣೆ ಹಿನ್ನೆಲೆ ಬಿಬಿಎಂಪಿಯಿಂದ ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕುಷ್ಠರೋಗ ನಿರ್ಮೂಲನ ಆಂದೋಲನಕ್ಕೆ ಚಾಲನೆ ನೀಡಲಾಯಿತು.

Sarvodaya Day from bbmp
ಬಿಬಿಎಂಪಿಯಿಂದ ಸರ್ವೋದಯ ದಿನಾಚರಣೆ

By

Published : Jan 30, 2021, 5:11 PM IST

ಬೆಂಗಳೂರು: ಸರ್ವೋದಯ ದಿನಾಚರಣೆ ಹಿನ್ನೆಲೆ ನಗರದ ಎಂಜಿ ರಸ್ತೆಯಲ್ಲಿರುವ ಗಾಂಧೀಜಿ ಪ್ರತಿಮೆಗೆ ಬಿಬಿಎಂಪಿ ಅಧಿಕಾರಿ ಗೌರವ್ ಗುಪ್ತಾ ಹಾಗೂ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಮಾಲಾರ್ಪಣೆ ಮಾಡಿದರು.

ಬಿಬಿಎಂಪಿಯಿಂದ ಸರ್ವೋದಯ ದಿನಾಚರಣೆ

ಈ ವೇಳೆ ಮಾತನಾಡಿದ ಮಂಜುನಾಥ್​ ಪ್ರಸಾದ್​, ಬಿಬಿಎಂಪಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ 'ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ' ಶೀರ್ಷಿಕೆಯಡಿ ಜಾಗೃತಿ ಆಂದೋಲನ ಜನವರಿ 30ರಿಂದ ಫೆಬ್ರವರಿ 13ರವರೆಗೆ ಹಮ್ಮಿಕೊಳ್ಳಲಾಗಿದೆ. 2016-17ನೇ ಸಾಲಿನಿಂದ ಪಾಲಿಕೆ ವ್ಯಾಪ್ತಿಯಲ್ಲಿ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅನುಷ್ಠಾನಗೊಂಡಿದೆ.

ಪಾಲಿಕೆ ವ್ಯಾಪ್ತಿಯಲ್ಲಿ 198 ವಾರ್ಡ್‌ಗಳಿದ್ದು, 141 ಆರೋಗ್ಯ ಕೇಂದ್ರಗಳು, 5 ಸಾರ್ವಜನಿಕ ಆಸ್ಪತ್ರೆಗಳು, 6 ವೈದ್ಯಕೀಯ ಕಾಲೇಜು/ಆಸ್ಪತ್ರೆಗಳು, 2 ಸ್ವಯಂಸೇವಾ ಸಂಸ್ಥೆಗಳು ಸದರಿ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿವೆ. ಆಂದೋಲನದ ಮೂಲಕ ಜನರನ್ನು ಸಂಪರ್ಕಿಸಿ, ರೋಗದ ಲಕ್ಷಣ ಹಾಗೂ ಚಿಕಿತ್ಸೆ ಕುರಿತು ಅರಿವು ಮೂಡಿಸಲಾಗುತ್ತೆ. ಕುಷ್ಠರೋಗದ ಲಕ್ಷಣಗಳು ಕಂಡುಬಂದರೆ ಕೂಡಲೇ ಪಾಲಿಕೆ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದು ಎಂದರು.

ABOUT THE AUTHOR

...view details