ಬೆಂಗಳೂರು:ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್-19 ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡಿನ ಶಶಿಕಲಾ ನಟರಾಜನ್ ಶ್ವಾಸಕೋಶದಲ್ಲಿ ಸೋಂಕು ಉಲ್ಬಣಿಸಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ನಿನ್ನೆ ರಾತ್ರಿಯ ವರದಿಯಂತೆ ಶಶಿಕಲಾ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇಂದು ಬೆಳಗ್ಗೆ 7 ಗಂಟೆಯ ಹೆಲ್ತ್ ಬುಲೆಟಿನ್ ಪ್ರಕಾರ ಶ್ವಾಸಕೋಶದಲ್ಲಿ ಸೋಂಕು ಉಲ್ಬಣಿಸಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇವರಿಗೆ ವಿಕ್ಟೋರಿಯಾ ಆಸ್ಪತ್ರೆ ತೀವ್ರ ನಿಘಾ ಘಟಕದಲ್ಲಿ ನುರಿತ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.