ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಮತ್ತೆ ನಿಷೇಧಿತ ಸ್ಯಾಟಲೈಟ್​​ ಫೋನ್​ ಸದ್ದು.. ಗುಪ್ತಚರ ಇಲಾಖೆ ಫುಲ್​ ಅಲರ್ಟ್​ - Satellite phone calls

ಬರೋಬ್ಬರಿ ಆರು ತಿಂಗಳ ಬಳಿಕ ರಾಜ್ಯದಲ್ಲಿ ಮತ್ತೊಮ್ಮೆ ಸ್ಯಾಟಲೈಟ್​ ಫೋನ್​ ಆ್ಯಕ್ಟೀವ್ ಆಗಿದ್ದು, ಕರಾವಳಿಯ ವಿವಿಧ ಪ್ರದೇಶಗಳಲ್ಲಿ ಈ ನಿಷೇಧಿತ ಫೋನ್​​ ಬಳಕೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Satellite phone calls
Satellite phone calls

By

Published : Jun 6, 2022, 9:43 AM IST

ಬೆಂಗಳೂರು:ಕಳೆದ ಕೆಲ ತಿಂಗಳ ಹಿಂದೆ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ನಿಷೇಧಿತ ಸ್ಯಾಟಲೈಟ್ ಫೋನ್​ ಇದೀಗ ಮತ್ತೊಮ್ಮೆ ರಿಂಗಣಿಸಿದೆ. ಕಳೆದ 10 ದಿನಗಳಲ್ಲಿ 4 ಕಡೆಗಳಿಂದ ಸ್ಯಾಟಲೈಟ್​ ಫೋನ್​​ ಸಂಪರ್ಕ ಸಾಧಿಸಿರುವ ಸಿಗ್ನಲ್​ ಪತ್ತೆಯಾಗಿದೆ.

​​ ಲಭ್ಯವಾಗಿರುವ ಮಾಹಿತಿ ಪ್ರಕಾರ ಕರಾವಳಿಯ ಮೂರು ಕಡೆಗಳಲ್ಲಿ ಹಾಗೂ ಚಿಕ್ಕಮಗಳೂರಿನ ದಟ್ಟಾರಣ್ಯದಲ್ಲಿ ನಿಷೇಧಿತ ಸ್ಯಾಟಲೈಟ್‌ ಫೋನ್‌ಗಳ ಸಿಗ್ನಲ್‌ ಪತ್ತೆಯಾಗಿದೆ. ಮೇ 23ರಿಂದ 29ರ ವರೆಗೆ ಮಂಗಳೂರಿನ ಎರಡು ಕಡೆ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ದಟ್ಟಾರಣ್ಯದಲ್ಲಿ ಸ್ಯಾಟಲೈಟ್‌ ಫೋನ್ ಸಿಗ್ನಲ್ ಪತ್ತೆಯಾಗಿವೆ ಎಂದು ಕೇಂದ್ರ ಗುಪ್ತಚರ ಇಲಾಖೆ ತಿಳಿಸಿದೆ. ಇದರ ಬೆನ್ನಲ್ಲೇ ರಾಜ್ಯ ಆಂತರಿಕ ಭದ್ರತಾ ವಿಭಾಗ ಸ್ಥಳಕ್ಕೆ ಭೇಟಿ ನೀಡಿ, ತನಿಖೆ ಆರಂಭಿಸಿದೆ ಎಂದು ವರದಿಯಾಗಿದೆ.

ನಿಷೇಧಿತ ಸ್ಯಾಟಲೈಟ್​ ಫೋನ್ ಬಳಕೆ ಮಾಡಿರುವ ವ್ಯಕ್ತಿಗಳ ಪತ್ತೆಗೆ ಇದೀಗ ಐಎಸ್​ಡಿ ಮುಂದಾಗಿದೆ. ಕಳೆದ ಒಂದು ವರ್ಷದಲ್ಲಿ ಇದು ಮೂರನೇ ಸಲ ಕರೆ ಮಾಡಿರುವ ಬಗ್ಗೆ ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ - ಶಿರಸಿಯ ಮಧ್ಯ ಇರುವ ದಟ್ಟಾರಣ್ಯ ಪ್ರದೇಶದಲ್ಲಿ, ಮಂಗಳೂರು ನಗರ ಹೊರಭಾಗದ ನಾಟೆಕಲ್, ಕುಳಾಯಿ ಹಾಗೂ ಚಿಕ್ಕಮಗಳೂರಿನ ಕಡೂರು - ಬೀರೂರು ನಡುವಿನ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್‌ ಫೋನ್‌ ಸಿಗ್ನಲ್ ಪತ್ತೆಯಾಗಿವೆ. ಹೀಗಾಗಿ, ಕೇಂದ್ರ ಗುಪ್ತಚರ ಇಲಾಖೆ ರಾಜ್ಯ ಪೊಲೀಸ್ ಇಲಾಖೆಗೆ ಎಚ್ಚರಿಕೆ ಸಹ ನೀಡಿದೆ.

ಪ್ರಾರ್ಥನೆ ವೇಳೆ ಗುಂಡು - ಬಾಂಬ್​ ದಾಳಿ.. ಚರ್ಚ್​ನಲ್ಲಿ ಪ್ರಾಣಬಿಟ್ಟ 50ಕ್ಕೂ ಹೆಚ್ಚು ಭಕ್ತಾದಿಗಳು!

ಶಂಕಿತ ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಇದರಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ. ಈ ಹಿಂದೆ ಕೂಡ ನಿಷೇಧಿತ ಸ್ಯಾಟಲೈಟ್ ಫೋನ್‌ಗಳ ಕುರಿತು ಕಳೆದ ವರ್ಷ ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗಿದ್ದು, ಕೇಂದ್ರೀಯ ಸಂಸ್ಥೆಗಳೊಂದಿಗೆ ಸರ್ಕಾರವು ಸಮನ್ವಯದಿಂದ ಪರಿಸ್ಥಿತಿ ನಿಭಾಯಿಸುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದರು. 2020 ರಲ್ಲಿ 256 ಮತ್ತು 2021 ರಲ್ಲಿ 220 ಸ್ಯಾಟಲೈಟ್ ಫೋನ್ ಬಳಕೆಯ ನಿದರ್ಶನಗಳಿವೆ ಎಂದು ತಿಳಿಸಿದ್ದರು.

ABOUT THE AUTHOR

...view details