ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಾರ್ಟಿಯ ರಾಜ್ಯ ಘಟಕವು ವಿಡಂಬನಾತ್ಮಕ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.
ಆಮ್ ಆದ್ಮಿ ಪಾರ್ಟಿಯ ಡಿಎಸ್ ಸಚಿನ್ ನೇತೃತ್ವದ ಸಾಮಾಜಿಕ ಜಾಲತಾಣ ನಿರ್ವಹಣಾ ತಂಡ ಈ ವಿಡಿಯೋ ಮಾಡಿದ್ದು, ಜೆಸಿಬಿ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಪಕ್ಷಗಳ ವಿರುದ್ಧ ಹಾಡು ರಚಿಸಿ ಟೀಕಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗೆ ಉತ್ತಮ ಪ್ರಕ್ರಿಯೆ ವ್ಯಕ್ತವಾಗುತ್ತಿದ್ದು, ಕೇವಲ ಫೇಸ್‌ಬುಕ್‌ನಲ್ಲೇ ನೂರಕ್ಕೂ ಹೆಚ್ಚು ಜನರು ಶೇರ್ ಮಾಡಿದ್ದಾರೆ.