ಬೆಂಗಳೂರು : ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆಗಿ ಪದೋನ್ನತಿ ಪಡೆದಿರುವ ಹಿನ್ನೆಲೆಯಲ್ಲಿ ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನಿಯೋಜಿಸಲಾಗಿದೆ.
ಸಂವಿಧಾನದ ವಿಧಿ 223ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ ರಾಷ್ಟ್ರಪತಿಗಳು ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಆಗಿರುವ ಸತೀಶ್ ಚಂದ್ರ ಶರ್ಮಾ ಅವರನ್ನು ಹಂಗಾಮಿ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ. ಈ ಕುರಿತು ಇಂದು ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದೆ.