ಬೆಂಗಳೂರು: ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ರಮೇಶ್ ಸಿಡಿ ವಿಚಾರಕ್ಕೂ ನಮಗೂ ಸಂಬಂಧವಿಲ್ಲ: ಸತೀಶ್ ಜಾರಕಿಹೊಳಿ - satish jarakiholi react about ramesh jarakiholi CD Issue
ರಮೇಶ್ ಜಾರಕಿಹೊಳಿ ಹೊರಗೆ ಬಂದು ಸತ್ಯ ಹೇಳಬೇಕು. ಸಾರ್ವಜನಿಕ ಜೀವನದಲ್ಲಿರೋ ಅವರು ಕಾನೂನು ಹೋರಾಟ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಇದನ್ನೂ ಓದಿ:ಜನಸಾಮಾನ್ಯರಿಗೆ ತೆರಿಗೆ ಹೊರೆ ಇಲ್ಲದ 2.46 ಲಕ್ಷ ಕೋಟಿ ಗಾತ್ರದ ಬಜೆಟ್
ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಅವರು ಸಿಡಿ ಪ್ರಕರಣ ವಾಪಸ್ ಪಡೆದ ವಿಚಾರವಾಗಿ ಮಾತನಾಡಿದ ಅವರು, ಕಲ್ಲಹಳ್ಳಿ ಯಾಕೆ ವಾಪಸ್ ಪಡೆದಿದ್ದಾರೋ ಅವರಿಗೆ ಗೊತ್ತು. ರಮೇಶ್ ಹೊರಗೆ ಬಂದು ಸತ್ಯ ಹೇಳಬೇಕು. ಸಾರ್ವಜನಿಕ ಜೀವನದಲ್ಲಿರೋ ಅವರು ಕಾನೂನು ಹೋರಾಟ ಮಾಡಬೇಕು ಎಂದರು.