ಬೆಳಗಾವಿ ಲೋಕಸಭಾ ಉಪಚುನಾವಣೆ: ಕೈ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಕಣಕ್ಕೆ - Belagavi Lokasabha byelection
12:35 March 26
ಎಐಸಿಸಿ ಇಂದು ಅಧಿಕೃತವಾಗಿ ಸತೀಶ್ ಜಾರಕಿಹೊಳಿ ಹೆಸರನ್ನು ಫೈನಲ್ ಮಾಡಿದೆ.
ಬೆಂಗಳೂರು:ಬೆಳಗಾವಿ ಲೋಕಸಭೆ ಉಪ ಚುನಾವಣೆಯ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷ ಸತೀಶ್ ಜಾರಕಿಹೊಳಿ ಹೆಸರನ್ನು ಘೋಷಿಸಿದೆ.
ಎಐಸಿಸಿ ಇಂದು ಅಧಿಕೃತವಾಗಿ ಸತೀಶ್ ಜಾರಕಿಹೊಳಿ ಹೆಸರನ್ನು ಫೈನಲ್ ಮಾಡಿದೆ. ಈ ಮುಂಚೆಯೇ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸತೀಶ್ ಜಾರಕಿಹೊಳಿ ಸ್ಪರ್ಧಿಸುವುದಾಗಿ ತಿಳಿಸಿದ್ದರು. ಇದೀಗ ಎಐಸಿಸಿ ಅಧಿಕೃತವಾಗಿ ಸತೀಶ್ ಜಾರಕಿಹೊಳಿ ಹೆಸರನ್ನು ಘೋಷಿಸಿದೆ.
ನಿನ್ನೆ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಹೆಸರನ್ನು ಘೋಷಿಸಿತ್ತು. ಇದೀಗ ಬೆಳಗಾವಿ ಲೋಕಸಭೆ ಉಪಸಮರದ ಅಖಾಡಕ್ಕೆ ಕಾಂಗ್ರೆಸ್ ಪಕ್ಷದಿಂದ ಸತೀಶ್ ಜಾರಕಿಹೊಳಿ ಕಣಕ್ಕಿಳಿದಿದ್ದಾರೆ. ಆ ಮೂಲಕ ಲೋಕಸಭೆ ಉಪಸಮರ ರಣಕಣ ಇನ್ನಷ್ಟು ಜಿದ್ದಾಜಿದ್ದಿನಿಂದ ಕೂಡಿರಲಿದೆ.