ಕರ್ನಾಟಕ

karnataka

ETV Bharat / state

ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಕೊರೊನಾ ಪಾಸಿಟಿವ್: ಆತಂಕ ಪಡುವ ಅಗತ್ಯವಿಲ್ಲ ಎಂದ ಪುತ್ರ ಸತ್ಯ ಪ್ರಕಾಶ್ - Shira JDS Candidate

ತಮ್ಮ ತಾಯಿಗೆ (ಅಮ್ಮಾಜಮ್ಮ) ಟಿಕೆಟ್ ನೀಡಿದ್ದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ದಿ. ಸತ್ಯನಾರಾಯಣ ಅವರ ಪುತ್ರ ಸತ್ಯ ಪ್ರಕಾಶ್ ಧನ್ಯವಾದ ಅರ್ಪಿಸಿದ್ದಾರೆ.

Satyaprakash reaction about his mother
ದಿ. ಸತ್ಯನಾರಾಯಣ ಅವರ ಪುತ್ರ ಸತ್ಯ ಪ್ರಕಾಶ್

By

Published : Oct 8, 2020, 9:29 PM IST

ಬೆಂಗಳೂರು : ನಮ್ಮ ತಂದೆಯ ಪ್ರಾಮಾಣಿಕತೆ ಮತ್ತು ಪಕ್ಷ ನಿಷ್ಠೆಗೆ ಒಪ್ಪಿ ನಮ್ಮ ತಾಯಿಗೆ (ಅಮ್ಮಾಜಮ್ಮ)ಗೆ ಟಿಕೆಟ್ ನೀಡಿದ್ದಾರೆ. ಹಾಗಾಗಿ ಪಕ್ಷದ ವರಿಷ್ಠರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ದಿ. ಸತ್ಯನಾರಾಯಣ ಅವರ ಪುತ್ರ ಸತ್ಯ ಪ್ರಕಾಶ್ ಹೇಳಿದ್ದಾರೆ.

ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಇಂದು ಶಿರಾ ಕ್ಷೇತ್ರದ ಮುಖಂಡರ ಸಭೆ ಮುಗಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ತಾಯಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಕಾರ್ಯಕರ್ತರು ಇದರಿಂದ ಆತಂಕ ಪಡಬೇಕಿಲ್ಲ.

ನಮಗೆ ಧೈರ್ಯ ತುಂಬಿರುವ ಕುಮಾರಸ್ವಾಮಿ ಅವರು ಚುನಾವಣೆ ಪ್ರಚಾರದಲ್ಲಿ ತಾವು ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ನಾಳೆಯಿಂದ ಚುನಾವಣಾ ಪ್ರಚಾರ ಕೈಗೊಳ್ಳುವಂತೆ ತಿಳಿಸಿದ್ದಾರೆ. ಹಾಗಾಗಿ ನಾಳೆ ಮಧ್ಯಾಹ್ನ ಪೂಜೆ ಮಾಡಿ ಪ್ರಚಾರ ನಡೆಸುತ್ತೇವೆ ಎಂದರು.

ಜೆಡಿಎಸ್ ಕಾರ್ಯಕರ್ತರು ಎಲ್ಲರೂ ಒಟ್ಟಾಗಿದ್ದೇವೆ, ಯಾವುದೇ ಗೊಂದಲ ಇಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣಾ ಪ್ರಚಾರ ಮಾಡುತ್ತೇವೆ. ಎಲ್ಲ ಸಮುದಾಯದವರು ತಮಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ABOUT THE AUTHOR

...view details