ಬೆಂಗಳೂರು:ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ಸ್ವಾಮೀಜಿ ನಡುವಿನ ತಿಕ್ಕಾಟ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಇಂದು ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಸವಿತಾನಂದ ಸ್ವಾಮೀಜಿ ಭಿಕ್ಷಾಟನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷ ನರೇಶ್ ಬದಲಾವಣೆಗೆ ಪಟ್ಟು ಹಿಡಿದಿರುವ ಇವರು ಈಗಾಗಲೇ ನಿಗಮದ ಅಧ್ಯಕ್ಷ ನರೇಶ್ ಬದಲಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾಗೆ ಮನವಿ ಮಾಡಿದ್ದಾರೆ. ಆದರೂ ಬದಲಾವಣೆ ಮಾಡದ ಕಾರಣ ಇದೀಗ ಭಿಕ್ಷಾಟನೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ.