ಬೆಂಗಳೂರು: ಪೋಷಕರು ಬೈದರು ಎಂಬ ಕ್ಷುಲ್ಲಕ ಕಾರಣಕ್ಕೆ ಶಾಲಾ ಬಾಲಕನೊಬ್ಬ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಸಾಯಿ ಕುಮಾರ್ (13) ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ.
ಈತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆ ಕೆಲಸ ಮಾಡುವ ವಿಚಾರಕ್ಕೆ ಕೋಪಗೊಂಡು ಮನೆಯ ಟೆರಸ್ ಮೇಲೆ ಹೋಗಿ ಕತ್ತಿಗೆ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.