ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 15ರವರೆಗೆ ಶಾಲಾ-ಕಾಲೇಜು ಬಾಗಿಲು ಬಂದ್ ಆಗಲಿದೆ.
ಕೋವಿಡ್- 19 ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಮಾರ್ಗಸೂಚಿ ನೀಡಿತ್ತು. ಆಗಸ್ಟ್ 29ರ ಮಾರ್ಗಸೂಚಿಯಂತೆ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ 9 ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 21ರಿಂದ ಶಾಲೆಗಳನ್ನು ತೆರೆದು ಸಂದೇಹ ಪರಿಹಾರಕ್ಕಾಗಿ ಶಾಲೆಗಳಿಗೆ ಭೇಟಿ ನೀಡಬಹುದೆಂದು ಅನುಮತಿ ನೀಡಲಾಗಿತ್ತು.