ಬೆಂಗಳೂರು :ದಿನದ ಬಹುತೇಕ ಸಮಯವನ್ನು ಶಾಲೆಯಲ್ಲೇ ಕಳೆಯುತ್ತಿದ್ದ ಶಾಲಾ ಮಕ್ಕಳು ಕೊರೊನಾ ಕಾರಣಕ್ಕೆ ಮನೆಯಲ್ಲೇ ಉಳಿಯುವಂತಾಗಿತ್ತು. ರಾಜ್ಯದಲ್ಲಿ ಬರೋಬ್ಬರಿ 2 ವರ್ಷಗಳ ಬಳಿಕ ಇಂದಿನಿಂದ ಶೇ.2ಕ್ಕಿಂತ ಪಾಸಿಟಿವ್ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲೆಯ 6ರಿಂದ 8ನೇ ತರಗತಿಗಳು ಆರಂಭವಾಗುತ್ತಿವೆ.
ಈಗಾಗಲೇ ಮೊದಲ ಹಂತವಾಗಿ 9ರಿಂದ 12ನೇ ತರಗತಿಗಳನ್ನು ಯಶಸ್ವಿಯಾಗಿ ಆರಂಭಿಸಿರುವ ಇಲಾಖೆ, 6ರಿಂದ 8ನೇ ತರಗತಿ ಮಕ್ಕಳ ಮನೆವಾಸ ಅಂತ್ಯಗೊಳಿಸಿದೆ. ಸರ್ಕಾರ ನಿರ್ಧರಿಸಿರುವಂತೆ ಇಂದಿನಿಂದ ಪ್ರಾಥಮಿಕ ಶಾಲೆಗಳು ಆರಂಭವಾಗಲಿವೆ.
ದಿನ ಬಿಟ್ಟು ದಿನ ಬ್ಯಾಚ್ಗಳಲ್ಲಿ ತರಗತಿ ಆರಂಭಿಸಲು ಸೂಚನೆ ಹೊರಡಿಸಲಾಗಿದೆ. ಶೇ.2ಕ್ಕಿಂತ ಪಾಸಿಟಿವ್ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಶಾಲಾರಂಭವಾಗಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ತರಗತಿಗಳು ನಡೆಯಲಿವೆ. ಶನಿವಾರ, ಭಾನುವಾರ ಎರಡು ದಿನ ಶಾಲೆಗೆ ಸ್ಯಾನಿಟೈಸ್ ಮಾಡಲು ತೀರ್ಮಾನಿಸಲಾಗಿದೆ.
6 ರಿಂದ 7ನೇ ತರಗತಿ ಮಕ್ಕಳಿಗೆ ಬೆಳಗ್ಗೆ 10: 30ರಿಂದ ಮಧ್ಯಾಹ್ನ 1:30ರವರೆಗೆ ತರಗತಿ ನಡೆಸಲಾಗುತ್ತಿದೆ. 8ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ 2 ಗಂಟೆಯಿಂದ 4:30ರ ತರಗತಿ ನಡೆಸಲು ಸೂಚಿಸಲಾಗಿದೆ. ಇನ್ನುಳಿದಂತೆ ಈಗಾಗಲೇ 9ರಿಂದ ಪಿಯುಸಿಗೆ ಕೊಟ್ಟ ಎಲ್ಲ ಮಾರ್ಗಸೂಚಿಗಳು ಇಲ್ಲಿಯೂ ಅನ್ವಯವಾಗಲಿವೆ.
ಶಾಲೆ ಆರಂಭಕ್ಕೆ ನೀಡಿರುವ ಮಾರ್ಗಸೂಚಿಗಳೇನು?
* ಈಗಾಗಲೇ ಬಿಡುಗಡೆ ಮಾಡಲಾಗಿರುವ SOP ಪಾಲಿಸುವುದು
* ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ
* ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೋವಿಡ್ ಸೋಂಕು ಇಲ್ಲದೇ ಇರುವುದನ್ನು ಪೋಷಕರು ಧೃಢೀಕರಿಸಬೇಕು