ಬೆಂಗಳೂರು:ಕೊರೊನಾ ಚಿಕಿತ್ಸೆಗಾಗಿ ಬಳಸುವ ತ್ಯಾಜ್ಯವನ್ನ ವಿಲೇವಾರಿ ಮಾಡುವುದು ಮುಖ್ಯ. ಹೀಗಾಗಿ ಆಯಾ ಜಿಲ್ಲೆಗಳಲ್ಲಿ ಕೋವಿಡ್-19ರ ಜೈವಿಕ-ವೈದ್ಯಕೀಯ ತ್ಯಾಜ್ಯವನ್ನು ಸುರಕ್ಷಿತ ಮತ್ತು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಕೊರೊನಾ ಚಿಕಿತ್ಸೆಗೆ ಬಳಸಿರುವ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಕಡ್ಡಾಯ: ಆರೋಗ್ಯ ಇಲಾಖೆ
ಕೋವಿಡ್-19ರ ಜೈವಿಕ-ವೈದ್ಯಕೀಯ ತ್ಯಾಜ್ಯವನ್ನು ಸುರಕ್ಷಿತ ಮತ್ತು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಕೊರೊನಾ ಚಿಕಿತ್ಸೆಗೆ ಬಳಸಿದ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಕಡ್ಡಾಯ
ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಮ್ಮ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಪ್ರತ್ಯೇಕ ಕೋವಿಡ್-19 ತ್ಯಾಜ್ಯವನ್ನು ಪ್ರತಿ ದಿನವೂ ಸಂಗ್ರಹಿಸಿ (CPCB ಮಾನದಂಡಗಳ ಪ್ರಕಾರ ಲೇಬಲ್ ಮತ್ತು ಪ್ಯಾಕ್) ಸುರಕ್ಷಿತವಾಗಿ ವಿಲೇವಾರಿ ಮಾಡಲು ಆದೇಶಿಸಲಾಗಿದೆ.