ಬೆಂಗಳೂರು: ಕೊರೊನಾ ಮಹಾಮಾರಿಯನ್ನು ರೋಗ ತಡೆಗಟ್ಟಲು ಸರ್ಕಾರ ಆಶಾ ಕಾರ್ಯಕರ್ತೆಯರು, ವೈದ್ಯರ ಮೂಲಕ ಆರೋಗ್ಯ ತಪಾಸಣೆ ನಡೆಸುತ್ತಿದೆ. ಅದರಂತೆ ಇಂದು ಬಿದರಹಳ್ಳಿ ಪಂಚಾಯಿತಿ ವ್ಯಾಪ್ತಿಯ ಹೀರಂಡಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ವೈದ್ಯಾಧಿಕಾರಿ ಡಾ.ಸುಧಾ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಸ್ಕ್ರೀನಿಂಗ್ ಮಾಡಿ ಕೊರೊನಾ ವೈರಸ್ ಲಕ್ಷಣಗಳ ಕುರಿತು ಪರೀಕ್ಷಿಸಿದರು.
ಪ್ರತಿಯೊಬ್ಬರೂ ವೈದ್ಯಕೀಯ ತಪಾಸಣೆ ಮಾಡಿಸಿ ತಮ್ಮಆರೋಗ್ಯ ಕಾಪಾಡಿಕೊಳ್ಳಿ ಹಾಗೂ ವೈದ್ಯರು ಸೂಚಿಸುವ ಸಲಹೆಗಳನ್ನ ಪಾಲಿಸಿ ಎಂದರು.