ಕರ್ನಾಟಕ

karnataka

ETV Bharat / state

ಜೂ. 18 ರಂದು ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ; 1016 ಪರೀಕ್ಷಾ ಕೇಂದ್ರಗಳು ಸಜ್ಜು - Second PU English Exam

ಇದೇ ತಿಂಗಳ 18ರಂದು ಪಿಯುಸಿ ಇಂಗ್ಲಿಷ್ ಪತ್ರಿಕೆ ಪರೀಕ್ಷೆ ನಡೆಯಲಿದ್ದು ನಿಗದಿಪಡಿಸಿ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಹಾಗೂ ಹೆಚ್ಚುವರಿ ಬ್ಲಾಕ್‌ಗಳನ್ನು ಮತ್ತು ಕಟ್ಟಡದ ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸರ್ ಮಾಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭ ವಾಗುವುದಕ್ಕಿಂತ ಮುಂಚೆ ಎಲ್ಲಾ ಮಕ್ಕಳನ್ನು ಥರ್ಮಲ್ ಸ್ಕ್ಯಾನರ್‌ಗಳನ್ನು ಮಾಡುವಂತೆ ತಿಳಿಸಲಾಗಇದೆ. ಹಾಗಾಗಿ ಮಕ್ಕಳು ಪರೀಕ್ಷಾ ಕೇಂದ್ರಕ್ಕೆ ಬೇಗನೆ ಆಗಮಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

Second PU English Exam on June 18th
ಜೂ. 18 ರಂದು ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ

By

Published : Jun 15, 2020, 8:43 PM IST

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2019-20ನೇ ಶೈಕ್ಷಣಿಕ ಸಾಲಿನ ಮಾರ್ಚ್-2020ರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರಾಜ್ಯದ 1016 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ಕೋವಿಡ್-19 ಹರಡುತ್ತಿರುವ ಹಿನ್ನೆಲೆಯಲ್ಲಿ ಕೊನೆಯ ಇಂಗ್ಲಿಷ್ ಪರೀಕ್ಷೆ ಮುಂದೂಡಲಾಗಿತ್ತು. ಇದೀಗ ಜೂ. 18 ರಂದು ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಲು ಇಲಾಖೆಯ ಎಲ್ಲಾ ಪೂರ್ವಸಿದ್ಧತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೋವಿಡ್-19 ಪ್ರಯುಕ್ತ ದ್ವಿತೀಯ ಪಿಯುಸಿ ಆಂಗ್ಲಭಾಷೆ ಪರೀಕ್ಷೆಯನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯ ಜೊತೆಗೆ ಅವರ ಆರೋಗ್ಯದ ದೃಷ್ಟಿಯಿಂದಲೂ ಇಲಾಖೆ ಸರ್ಕಾರದ ನಿರ್ದೇಶನದ ಅನುಸಾರ ಜಿಲ್ಲಾಡಳಿತ, ಕಂದಾಯ, ಗೃಹ, ಆರೋಗ್ಯ ಮತ್ತು ಕುಟುಂಬ ಇಲಾಖೆ, ಸಾರಿಗೆ ಇಲಾಖೆ ಹಾಗೂ ಮುಂತಾದ ಇಲಾಖೆಗಳ ಸಹಕಾರದೊಂದಿಗೆ ಪರೀಕ್ಷೆಯನ್ನು ನಡೆಸಲು ಹಲವು ಕ್ರಮ ಕೈಗೊಂಡಿದೆ.

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಆಂಗ್ಲಭಾಷೆ ವಿಷಯಕ್ಕೆ 5,95,000 ವಿದ್ಯಾರ್ಥಿಗಳು ಹಾಜರಾಗಲಿದ್ದು, 1016 ಪರೀಕ್ಷಾ ಕೇಂದ್ರಗಳಿದ್ದು, ಅವುಗಳಲ್ಲಿ ಜಿಲ್ಲಾ ಕೇಂದ್ರದಲ್ಲಿ 430, ತಾಲೂಕು ಕೇಂದ್ರಗಳಲ್ಲಿ 328 ಮತ್ತು ಹೋಬಳಿ ಮಟ್ಟದಲ್ಲಿ 258 ಕೇಂದ್ರ ಗಳಿರುತ್ತವೆ. ಇವುಗಳ ಜೊತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಅಗತ್ಯವಿರುವಲ್ಲಿ ಹೆಚ್ಚುವರಿ ಬ್ಲಾಕ್​ಗಳನ್ನು ನಿರ್ಮಿಸಿ ಪರೀಕ್ಷಾ ಕೇಂದ್ರಗಳನ್ನಾಗಿ ಮಾಡಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ವಸತಿ ನಿಲಯಗಳಲ್ಲಿ ನೆಲಸಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಅವರು ಸ್ವಂತ ಜಿಲ್ಲಾ ವ್ಯಾಪ್ತಿಯಲ್ಲಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಾಗಿದೆ.

ಹೀಗೆ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡು ಬರೆಯುವವರ ಸಂಖ್ಯೆ 18,524 ವಿದ್ಯಾರ್ಥಿಗಳು ಇದ್ದಾರೆ. ಈಗಾಗಲೇ ನಿಗದಿಪಡಿಸಿ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಹಾಗೂ ಹೆಚ್ಚುವರಿ ಬ್ಲಾಕ್‌ಗಳನ್ನು ಮತ್ತು ಕಟ್ಟಡದ ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸರ್ ಮಾಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭ ವಾಗುವುದಕ್ಕಿಂತ ಮುಂಚೆ ಎಲ್ಲಾ ಮಕ್ಕಳನ್ನು ಥರ್ಮಲ್ ಸ್ಕ್ಯಾನರ್‌ಗಳನ್ನು 200 ವಿದ್ಯಾರ್ಥಿಗಳಿಗೆ ಒಂದರಂತೆ ಖರೀದಿಸಿ ಸ್ಯಾನಿಂಗ್ ಮಾಡಲು ವ್ಯವಸ್ಥೆಮಾಡಲಾಗಿದೆ.

ಹೀಗಾಗಿ ಮಕ್ಕಳು ಪರೀಕ್ಷಾ ಕೇಂದ್ರಕ್ಕೆ ಬೇಗನೆ ಆಗಮಿಸಲು ತಿಳಿಸಲಾಗಿದೆ. ಒಂದು ವೇಳೆ ಯಾವುದೇ ವಿದ್ಯಾರ್ಥಿಗೆ ಅನಾರೋಗ್ಯದ ಲಕ್ಷಣಗಳು ಕಂಡುಬಂದಲ್ಲಿ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಯಾವುದಾದರೂ ಕಾರಣಗಳಿಂದ ಪ್ರಸ್ತುತ ನಡೆಯಲಿರುವ ಆಂಗ್ಲಭಾಷಾ ಪರೀಕ್ಷೆಗೆ ವಿದ್ಯಾರ್ಥಿಗಳು ಗೈರು ಹಾಜರಾದಲ್ಲಿ ಮುಂಬರುವ ಪರೀಕ್ಷೆಯಲ್ಲಿ ರೆಗ್ಯುಲರ್ ವಿದ್ಯಾರ್ಥಿ ಎಂದೇ ಪರಿಗಣಿಸಲಾಗುತ್ತೆ. ಇದರಿಂದ ವಿದ್ಯಾರ್ಥಿ ಹಾಗೂ ಪೋಷಕರು ಆತಂಕ ಪಡ ಬೇಕಾಗಿಲ್ಲ. ‌ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಕೊಠಡಿಗಳನ್ನು ಪ್ರವೇಶಿಸುವಾಗ ಹಾಗೂ ಕೊಠಡಿಯಿಂದ ನಿರ್ಗಮಿಸುವಾಗ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಆರೋಗ್ಯದದೃಷ್ಟಿಯಿಂದ ತೀವ್ರ ನಿಗಾವಹಿಸಲು ಹೆಚ್ಚುವರಿಯಾಗಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗಿದೆ.

1,889 ವಿದ್ಯಾರ್ಥಿಗಳು ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬಂದು ಪರೀಕ್ಷೆ ಬರೆಯುವವರಿಗೆ ಅವರು ಆಯ್ಕೆ ಮಾಡಿಕೊಂಡ ಜಿಲ್ಲಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಗಡಿ ಭಾಗದ ಜಿಲ್ಲೆಗಳಲ್ಲಿ ಪರೀಕ್ಷೆಗೆ ಹಾಜರಾಗಲು ಅವಕಾಶ ಮಾಡಿಕೊಡಲಾಗಿದೆ. ಪರೀಕ್ಷಾ ಕೇಂದ್ರ ಬದಲಾವಣೆ ಬಯಸಿ ಅರ್ಜಿ ಹಾಕಿರುವ ವಿದ್ಯಾರ್ಥಿಗಳಿಗೆ ಈಗಾಗಲೇ ಇಲಾಖೆಯ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ವೆಬ್ ಸೈಟ್ www.puc.kar.nic.in ರಲ್ಲಿ ತಮ್ಮ ಹೊಸ ಪರೀಕ್ಷಾ ಕೇಂದ್ರದ ವಿವರವನ್ನು (Additional admission Ticket) Down load ಮಾಡಿ ಅದರ Hard Copy ಮತ್ತು ಈ ಹಿಂದಿನ ಹಾಲ್​ ಟಿಕೆಟ್​ನೊಂದಿಗೆ ಹಂಚಿಕೆ ಮಾಡಲಾದ ಹೊಸ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆಯಬಹುದಾಗಿದೆ.

ಪರೀಕ್ಷಾ ಕೇಂದ್ರದ ಬದಲಾವಣೆ ಬಯಸಿದ ವಿದ್ಯಾರ್ಥಿಗಳು ತಾಂತ್ರಿಕ ಕಾರಣಗಳಿಂದ ಕೇಂದ್ರ ಬದಲಾವಣೆ ಆಗಿದ್ದ ಪಕ್ಷದಲ್ಲಿ ಅಥವಾ ಬದಲಾವಣೆಗೊಂಡ ಪರೀಕ್ಷಾ ಕೇಂದ್ರಕ್ಕೆ ಹೋಗಲು ಅಸಾಧ್ಯವಾದರೆ ತಮ್ಮ ಮೂಲ ಹಿಂದಿನ ಪರೀಕ್ಷಾ ಕೇಂದ್ರದಲ್ಲಿ ಕೂಡಾ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ. ಆಂಗ್ಲಭಾಷಾ ವಿಷಯವನ್ನು ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಸಾರಿಗೆ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಿ ಬರಲು ತಮ್ಮ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣ ಬೆಳೆಸಲು ಸಾರಿಗೆ ಇಲಾಖೆಯಿಂದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪೋಷಕರ ಸಮಸ್ಯೆಗಳಿಗೆ ವಿಷಯದ ಪರೀಕ್ಷಾ ಸಂಬಂಧಿಸಿದಂತೆ ವಿದ್ಯಾರ್ಥಿಗಳ/ ಇಲಾಖೆ ಕೇಂದ್ರ ಕಚೇರಿ ಜೊತೆಗೆ ಜಿಲ್ಲಾ ಹಂತದಲ್ಲಿ ಸಹ ಸಹಾಯವಾಣಿಯನ್ನು ತೆರಯಲಾಗಿದೆ. ಸಹಾಯವಾಣಿಯ ದೂರವಾಣಿ ಸಂಖ್ಯೆಗಳನ್ನು ಇಲಾಖಾ ವೆಬ್​ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ABOUT THE AUTHOR

...view details