ಬೆಂಗಳೂರು: 2020ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 4ರಿಂದ 23ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ ಪ್ರಯಾಣದಲ್ಲಿ ರಿಯಾಯಿತಿ ನೀಡಲಾಗುತ್ತಿದೆ.
ದ್ವಿತೀಯ ಪಿಯು ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಿಎಂಟಿಸಿ ಪ್ರಯಾಣ ರಿಯಾಯಿತಿ - Second PU Examination
2020ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 4ರಿಂದ 23ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ ಪ್ರಯಾಣದಲ್ಲಿ ರಿಯಾಯಿತಿ ನೀಡಲಾಗುತ್ತಿದೆ.
![ದ್ವಿತೀಯ ಪಿಯು ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಿಎಂಟಿಸಿ ಪ್ರಯಾಣ ರಿಯಾಯಿತಿ Second PU Examination](https://etvbharatimages.akamaized.net/etvbharat/prod-images/768-512-6192290-thumbnail-3x2-bmtc.jpg)
ವಿದ್ಯಾರ್ಥಿಗಳಿಗೆ ಬಿಎಂಟಿಸಿ ಪ್ರಯಾಣ ರಿಯಾಯಿತಿ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ರಿಯಾಯಿತಿ ಪಾಸ್ ವಿತರಣೆ ಮಾಡುತ್ತಿದೆ. ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ಇರುತ್ತವೆ. ಹೀಗಾಗಿ ಸಂಸ್ಥೆಯು ಪರೀಕ್ಷಾ ದಿನಗಳಂದು, ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಬಸ್ನಲ್ಲಿ ಪ್ರಯಾಣಿಸುವಾಗ ದ್ವಿತೀಯ ಪಿಯುಸಿ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.