ಕರ್ನಾಟಕ

karnataka

ETV Bharat / state

ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ ಬಿಡುಗಡೆ - karnataka second puc model answer paper

ಮಾರ್ಚ್​ 09 ರಿಂದ 23 ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

second-puc-question-papers-model-answer-release
ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಮಾದರಿ ಉತ್ತರ ಬಿಡುಗಡೆ..!

By

Published : Mar 25, 2023, 7:37 PM IST

ಬೆಂಗಳೂರು:2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕಲ್ಪಿಸಿದೆ.

ಮಾರ್ಚ್​ 09 ರಿಂದ 23 ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ (Scheme of Evaluation) ಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಮಾರ್ಚ್ 25 ರಿಂದ 29 ರವರೆಗೆ ನಡೆಯಲಿರುವ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಈ ಉತ್ತರ ಪತ್ರಿಕೆಗಳ ಮಾದರಿ ಬಿಡುಗಡೆ ವಿಷಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರುಗಳಿಂದ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಆನ್‌ಲೈನ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಇಂದಿನಿಂದ ಮಾರ್ಚ್ 27ರ 5 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ನಂತರ ಸಲ್ಲಿಸಲಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.

ಈ ಕೆಳಗಿನ ಲಿಂಕ್ ಬಳಸಿ ಅಥವಾ ಇ-ಮೇಲ್ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ‌.

1) ಮಂಡಳಿಯ ವೆಬ್‌ಸೈಟ್ ವಿಳಾಸ :https://kseab.karnataka.gov.in/ → Latest News→ Click here for filing objections for II PUC Annual Examination March 2023 Scheme of Evaluation.

2) ಇ-ಮೇಲ್ ವಿಳಾಸ :jdexam.kseab@gmail.com

ಇಂದಿನ ಪರೀಕ್ಷೆ ಹಾಜರಾತಿ ವಿವರ - ದ್ವಿತೀಯ ಪಿಯುಸಿ ಪೊಲಿಟಿಕಲ್ ಸೈನ್ಸ್ ಪರೀಕ್ಷೆ: 17,897 ವಿದ್ಯಾರ್ಥಿಗಳು ಗೈರು :ರಾಜ್ಯದಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಂದು ಪೊಲಿಟಿಕಲ್ ಸೈನ್ಸ್ (ರಾಜ್ಯಶಾಸ್ತ್ರ) ವಿಷಯದ ಪರೀಕ್ಷೆ ನಡೆದಿದ್ದು, ಒಟ್ಟು 17,897 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ರಾಜ್ಯಾದ್ಯಂತ ಮಾರ್ಚ್ 29ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು ಒಟ್ಟು 32 ಜಿಲ್ಲೆಗಳಿಂದ ಒಟ್ಟು 2,62,028 ವಿದ್ಯಾರ್ಥಿಗಳು ಪರೀಕ್ಷೆಗೆ ಈ ವಿಷಯದ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು ಪೊಲಿಟಿಕಲ್ ಸೈನ್ಸ್ ಪರೀಕ್ಷೆಗೆ ಇಂದು 2,44,131 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 17,897 ವಿದ್ಯಾರ್ಥಿಗಳು ಗೈರಾಗಿದ್ದು ಶೇಕಡ 93.17 ರಷ್ಟು ಹಾಜರಾತಿ ಇತ್ತು ಎಂದು ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಬಹುತೇಕ ಜಿಲ್ಲೆಗಳಲ್ಲಿ ಶೇಕಡ 90 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಬೀದರ್​ನಲ್ಲಿ ಮಾತ್ರ 85.42ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇನ್ನು ಶೈಕ್ಷಣಿಕ ಪ್ರಗತಿ ಜಿಲ್ಲೆಯಾದ ಉಡುಪಿ ಚಿಕ್ಕಮಗಳೂರಿನಲ್ಲಿ ಶೇ.98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಎಲ್ಲಿಯೂ ಅಹಿತಕರ ಘಟನೆ ನಡೆದ ಬಗ್ಗೆ ವರದಿ ಆಗಿಲ್ಲ. ಯಾವುದೇ ಡಿಬಾರ್ ಆಗಿಲ್ಲ. ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಅತ್ಯಂತ ಶಾಂತಿಯುತವಾಗಿ ನಡೆದಿದೆ.

ಇದನ್ನೂ ಓದಿ:ಎಸ್​ಸಿ ಒಳಮೀಸಲಾತಿ, ಒಕ್ಕಲಿಗರಿಗೆ ಶೇ 6, ಲಿಂಗಾಯತರಿಗೆ ಶೇ 7 ಮೀಸಲಾತಿ ಪ್ರಮಾಣ ಘೋಷಣೆ: ಮುಸ್ಲಿಮರ ಓಬಿಸಿ ಕೋಟಾ ರದ್ದು

ABOUT THE AUTHOR

...view details