ಬೆಂಗಳೂರು:ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದಿದ್ದು, ನಾಳೆ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್ - ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸಚಿವ ಸುರೇಶ್ ಕುಮಾರ್
ಕೊರೊನಾ ನಡುವೆಯೇ ಜೂನ್ 18ರಿಂದ ಆರಂಭಗೊಂಡ ಪರೀಕ್ಷೆಗಳು ಯಶಸ್ವಿಯಾಗಿ ಕೊನೆಗೊಂಡಿದ್ದವು. ಸದ್ಯ ಪರೀಕ್ಷಾ ಮೌಲ್ಯಮಾಪನ ಕೆಲಸ ಮುಗಿದಿದ್ದು, ನಾಳೆ 12 ಗಂಟೆ ನಂತರ ಪಿಯು ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಎಲ್ಲರಿಗೂ ಅವರವರ ಮೊಬೈಲ್ಗೆ ಫಲಿತಾಂಶ ಬರುವ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಇಂದು ಈ ದೃಷ್ಟಿಯಿಂದ ಎಲ್ಲರೊಟ್ಟಿಗೆ ಸಭೆ ನಡೆಸಿದ್ದು, ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.