ಬೆಂಗಳೂರು : ಮಾರ್ಚ್ 9 ರಿಂದ 29ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು (ಶುಕ್ರವಾರ) ಪ್ರಕಟಗೊಳ್ಳಲಿದೆ. ಬೆಳಗ್ಗೆ 10 ಗಂಟೆಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಸುದ್ದಿಗೋಷ್ಟಿ ಕರೆದಿದ್ದು, ಬಳಿಕ ಫಲಿತಾಂಶ ಪ್ರಕಟಿಸಲಿದೆ. 11 ಗಂಟೆಯಿಂದಲೇ https://karresults.nic.in ವೆಬ್‌ಸೈಟ್‌ನಲ್ಲಿ ರಿಸಲ್ಟ್ ವೀಕ್ಷಿಸಬಹುದು.
ಈ ಬಾರಿ 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದರು. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.