ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಸೆಪ್ಟೆಂಬರ್ 12ರಂದು ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಸೆ.12ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ : ನಾಗೇಶ್ ಟ್ವೀಟ್ - ಈಟಿವಿ ಭಾರತ ಕನ್ನಡ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.
ಸೆ.12ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ : ನಾಗೇಶ್ ಟ್ವೀಟ್
ಈ ಬಾರಿಯ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲಾಗಿತ್ತು. 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಒಟ್ಟು 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ಭೇಟಿ ನೀಡಿ ವೀಕ್ಷಿಸಬಹುದಾಗಿದೆ.
ಇದನ್ನೂ ಓದಿ :ಐದು ಟ್ರಿಲಿಯನ್ ಡಾಲರ್ ಅರ್ಥವ್ಯವಸ್ಥೆಗೆ ಬಹು ಮಾದರಿ ಸಾರಿಗೆ ವ್ಯವಸ್ಥೆ ಅಗತ್ಯ: ನಿತಿನ್ ಗಡ್ಕರಿ