ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ಸೋಂಕಿನ 3 ನೇ ಅಲೆ ಹೆಚ್ಚಾಗುತ್ತಿದೆ. ಕೊರೊನಾಗೆ ಕಡಿವಾಣ ಹಾಕುವ ಉದ್ದೇಶದಿಂದ ರಾಜ್ಯದಲ್ಲಿ ಸತತ ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಅಗತ್ಯ ವಸ್ತುಗಳ ಖರೀದಿಗಷ್ಟೇ ಅವಕಾಶ ನೀಡಲಾಗಿದೆ. ಹೀಗಾಗಿ, ನಿತ್ಯ ಜನಜಂಗುಳಿಯಿಂದ ಕೂಡಿದ್ದ ಹಾರ್ಟ್ ಆಫ್ ದಿ ಸಿಟಿ ಮೆಜೆಸ್ಟಿಕ್ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ.
ವೀಕೆಂಡ್ ಕರ್ಫ್ಯೂ ಜಾರಿಯಾದ ಹಿನ್ನೆಲೆ ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ತನಕ ಬಿಎಂಟಿಸಿ ಓಡಾಟ ಇರುವುದಿಲ್ಲ. ಕೇವಲ ತುರ್ತು ಸೇವೆಗಷ್ಟೇ ಅವಕಾಶ ಕಲ್ಪಿಸಲಾಗಿದ್ದು, ಭಾಗಶಃ ಬಸ್ಗಳು ಡಿಪೋಗಳಲ್ಲಿ ನಿಂತಿವೆ.
ರಾಜಧಾನಿಯಲ್ಲಿ ಎಂದಿನಂತೆ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಇರಲಿದೆ. ಸಾಮಾನ್ಯವಾಗಿ ಸಂಕ್ರಾಂತಿ ಹಬ್ಬದಂದು ಪ್ರಯಾಣಿಕರಿಗಾಗಿ ಹೆಚ್ಚುವರಿ ಬಸ್ಗಳನ್ನ ನಿಯೋಜನೆ ಮಾಡುತ್ತಿದ್ದ ನಿಗಮ, ಇದೀಗ ಪ್ರಯಾಣಿಕರು ಇದ್ದರಷ್ಟೇ ಬಸ್ ಓಡಿಸಲು ಮುಂದಾಗಿದೆ. ಕಡಿಮೆ ಪ್ರಮಾಣದ ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗಿಳಿದಿದ್ದರೂ ಕೂಡ ಪ್ರಯಾಣಿಕರೇ ಇಲ್ಲ.