ಬೆಂಗಳೂರು: ಕೊರೊನಾ ರೂಪಾಂತರಿ ವೈರಸ್ ಹರಡುವ ಭೀತಿ ಹಿನ್ನೆಲೆ, ಸಾಮೂಹಿಕ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದ್ದು, ಜನ ಸೇರುವುದನ್ನು ತಪ್ಪಿಸುವ ಸಲುವಾಗಿ ಇಂದು ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಮೂವರಿಗೆ ಬ್ರಿಟನ್ನ ರೂಪಾಂತರ ವೈರಸ್ ಪಾಸಿಟಿವ್ ಬಂದಿದೆ. ಅದು ವೇಗವಾಗಿ ಹರಡುವ ಕಾರಣ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗುತ್ತಿದೆ, ಹೊಸ ವರ್ಷಾಚರಣೆ ನೆಪದಲ್ಲಿ ಜನ ಸೇರಿದಲ್ಲಿ ವೈರಾಣು ಅತಿ ವೇಗದಲ್ಲಿ ಹಬ್ಬಲು ಸಹಕಾರಿಯಾಗಲಿದೆ. ಈ ಕಾರಣದಿಂದಾಗಿ ಈಗಾಗಲೇ ನಗರದಲ್ಲಿ 144 ಸೆಕ್ಷನ್ ಜಾರಿ ಆದೇಶ ಮಾಡಿದ್ದು, ಇಂದು ಮಧ್ಯಾಹ್ನದಿಂದಲೇ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ 144 ಸೆಕ್ಷೆನ್ ಅನುಷ್ಠಾನಕ್ಕೆ ತರಲಾಗಿದೆ ಎಂದರು.