ಕರ್ನಾಟಕ

karnataka

ETV Bharat / state

ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ : ಎನ್ಐಎ ತನಿಖೆಗೆ ಕೋರಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರಿನಲ್ಲಿ ನಡೆದಿದ್ದ ಸಿಎಎ ವಿರೋಧದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶದ್ರೋಹ ಆರೋಪದಡಿ ಜೈಲು ಪಾಲಾಗಿದ್ದ ಅಮೂಲ್ಯ ಲಿಯೋನ್ ಜಾಮೀನಿನ ಮೇಲೆ ಹೊರಬಂದಿದ್ದು, ಇದೀಗ ಮಂಡ್ಯ ಮೂಲದ ವಕೀಲರೊಬ್ಬರು ಅಮೂಲ್ಯಳ ಪ್ರಕರಣವನ್ನು ಎನ್ಐಎ ವಹಿಸಬೇಕು ಎಂದು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

By

Published : Jun 19, 2020, 9:10 PM IST

Sedition case against Amulya
ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ

ಬೆಂಗಳೂರು: ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶದ್ರೋಹ ಆರೋಪಕ್ಕೆ ಸಿಲುಕಿರುವ ಅಮೂಲ್ಯಳ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ವಹಿಸಬೇಕು ಎಂದು ಕೋರಿ ವಕಿಲರೊಬ್ಬರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಮಂಡ್ಯ ಮೂಲದ ವಕೀಲರಾದ ವಿಶಾಲ ರಘು ಎಂಬುವರು ಪ್ರಕರಣದ ತನಿಖೆಯನ್ನು ಎನ್ಐಗೆ ವಹಿಸಬೇಕು ಎಂದು ಕೋರಿ ಹೈಕೋರ್ಟ್ ಗೆ ಅರ್ಜಿ ದಾಖಲಿಸಿದ್ದಾರೆ. ಅರ್ಜಿಯಲ್ಲಿ, ಅಮೂಲ್ಯ ಪಾಕಿಸ್ತಾನದ ಪರ ಘೋಷಣೆ ಕೂಗಿದ ನಂತರ ಪ್ರಕರಣ ದಾಖಲಿಸಿರುವ ಉಪ್ಪಾರಪೇಟೆ ಠಾಣೆ ಪೊಲೀಸರು ಮತ್ತು ತನಿಖಾಧಿಕಾರಿ ನಿಗದಿತ ಅವಧಿಯಲ್ಲಿ ತನಿಖಾ ವರದಿ ಮತ್ತು ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಇದರಿಂದಾಗಿಯೇ ಕಾನೂನು ಅವಕಾಶ ಬಳಸಿಕೊಂಡು ಗುರುತರ ಆರೋಪ ಎಸಗಿರುವ ಅಮೂಲ್ಯ ಜಾಮೀನು ಪಡೆದುಕೊಂಡಿದ್ದಾರೆ.

ತನಿಖಾಧಿಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಸಾಕ್ಷಿಗಳಿದ್ದರೂ ಸಹ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಹೀಗಾಗಿ ತನಿಖಾಧಿಕಾರಿಯನ್ನು ಅಮಾನತು ಮಾಡಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು. ಅಮೂಲ್ಯ ಜಾಮೀನು ರದ್ದತಿಗೆ ಅರ್ಜಿ ಸಲ್ಲಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಅಮೂಲ್ಯ ಭಯೋತ್ಪಾದಕರ ಸಂಪರ್ಕ ಹೊಂದಿರುವ ಸಾಧ್ಯತೆ ಇದ್ದು, ಈ ಕುರಿತು ತನಿಖೆ ನಡೆಸಲು ಸೂಕ್ತ ತನಿಖಾ ಸಂಸ್ಥೆಯಾದ ಎನ್ಐಎಗೆ ವಹಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಅರ್ಜಿಯಲ್ಲಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಡಿಜಿಐಜಿ, ನಗರ ಪೊಲೀಸ್ ಆಯುಕ್ತ, ಚಿಕ್ಕಪೇಟೆ ಎಸಿಪಿ, ಉಪ್ಪಾರಪೇಟೆ ಇನ್ಸ್‌ಪೆಕ್ಟರ್. ಎನ್ಐಎ ಹಾಗು ಆರೋಪಿ ಅಮೂಲ್ಯ ಲಿಯೋನಾಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನೂ ವಿಚಾರಣೆಗೆ ನಿಗದಿಯಾಗಬೇಕಿದೆ.

ABOUT THE AUTHOR

...view details