ಕರ್ನಾಟಕ

karnataka

By

Published : Nov 30, 2021, 5:51 PM IST

ETV Bharat / state

ಕೋರ್ಟ್ ಆನ್​​ಲೈನ್ ಕಲಾಪದಲ್ಲಿ ಕಾಣಿಸಿಕೊಂಡ ಅರೆನಗ್ನ ವ್ಯಕ್ತಿ : ನೋಟಿಸ್ ಜಾರಿ ಮಾಡಲು ಹೈಕೋರ್ಟ್ ಆದೇಶ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿರುವಾಗ ವ್ಯಕ್ತಿಯೊಬ್ಬ ಅರೆಬೆತ್ತಲಾಗಿ ಕಾಣಿಸಿಕೊಂಡಿದ್ದಾನೆ. ಘಟನೆ ಹಿನ್ನೆಲೆ ನ್ಯಾಯಾಲಯ ಆತನಿಗೆ ನೋಟಿಸ್​ ನೀಡಲು ಮುಂದಾಗಿದೆ.

Semi naked man appears in when Trial in online : High Court order to issue notice
ಕೋರ್ಟ್ ಆನ್​​ಲೈನ್ ಕಲಾಪದಲ್ಲಿ ಕಾಣಿಸಿಕೊಂಡ ಅರೆ ನಗ್ನ ವ್ಯಕ್ತಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದ ವೇಳೆ ವ್ಯಕ್ತಿಯೋರ್ವ ಅರೆನಗ್ನವಾಗಿ ಕಾಣಿಸಿಕೊಂಡಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಆತನಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿದೆ.

ಪ್ರಕರಣದ ವಿಚಾರಣೆ ವೇಳೆ ಶ್ರೀಧರ್‌ ಭಟ್‌ ಎಸ್‌ಡಿಎಂಸಿ ಉಜಿರೆ ಹೆಸರಿನಲ್ಲಿ ವರ್ಚುವಲ್ ಕೋರ್ಟ್​ ಕಲಾಪಕ್ಕೆ ಲಾಗಿನ್‌ ಆಗಿದ್ದ ವ್ಯಕ್ತಿಯೋರ್ವ ಅರೆನಗ್ನವಾಗಿ ಕಾಣಿಸಿಕೊಂಡಿದ್ದ. ಇದನ್ನು ಗಮನಿಸಿದ ಹಿರಿಯ ವಕೀಲೆ ಹಾಗೂ ಯುವತಿ ಪರ ವಾದ ಮಂಡಿಸುತ್ತಿದ್ದ ಇಂದಿರಾ ಜೈಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವೇಳೆ ಕೋರ್ಟ್ ಪ್ರಕರಣದ ವಿಚಾರಣೆಯಲ್ಲಿ ತೊಡಗಿದ್ದರಿಂದ ಅದರ ಬಗ್ಗೆ ಚರ್ಚಿಸಲಿಲ್ಲ. ಪ್ರಕರಣದ ವಿಚಾರಣೆ ಕೊನೆಯಲ್ಲಿ ಇದೇ ವಿಚಾರ ಪ್ರಸ್ತಾಪಿಸಿ ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್ ಅವರು ಅರೆನಗ್ನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರು ಸುಮಾರು 20 ನಿಮಿಷಗಳಿಗೂ ಹೆಚ್ಚು ಕಾಲ ವರ್ಚುವಲ್‌ ವಿಚಾರಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಾನು ಮಹಿಳಾ ವಕೀಲೆಯಾಗಿದ್ದು, ಅದನ್ನು ನೋಡಿಕೊಂಡು ನನಗೆ ಸರಿಯಾಗಿ ವಾದಿಸಲು ಸಮಸ್ಯೆಯಾಗಿತ್ತು. ಹಲವು ತಿಂಗಳಿಂದ ನಾನು ವರ್ಚುವಲ್‌ ವಿಚಾರಣೆಯಲ್ಲಿ ಭಾಗಿಯಾಗಿದ್ದೇನೆ. ಈ ರೀತಿ ಎಂದಿಗೂ ಆಗಿರಲಿಲ್ಲ. ಹೈಕೋರ್ಟ್‌ ವಿಚಾರಣೆಯ ಸಂದರ್ಭದಲ್ಲಿ ಹೀಗಾಗುತ್ತದೆ ಎಂದರೆ ಹೇಗೆ? ಹೈಕೋರ್ಟ್‌ ಘನತೆ ಏನಾಗಬೇಕು? ಆ ವ್ಯಕ್ತಿ ಅರೆ ನಗ್ನವಾಗಿ ಕಾಣಿಸಿಕೊಂಡಿದ್ದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ದಾಖಲೆ ಇದೆ. ಅದನ್ನು ಕಳುಹಿಸಿಕೊಡುತ್ತೇನೆ. ಇದು ನ್ಯಾಯಾಂಗ ನಿಂದನೆಯಾಗಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು.

ಕೋರಿಕೆ ಪರಿಗಣಿಸಿದ ಪೀಠ, ಅರೆ ನಗ್ನವಾಗಿ ಕಾಣಿಸಿಕೊಂಡಿದ್ದನ್ನು ನಾವು ನೋಡಿಲ್ಲ. ಆದರೂ ಆ ವ್ಯಕ್ತಿಯ ಮಾಹಿತಿಯನ್ನು ದತ್ತಾಂಶದಲ್ಲಿ ಪರಿಶೀಲಿಸಿ ಅವರಿಗೆ ನೋಟಿಸ್‌ ಜಾರಿಗೊಳಿಸಿ ಎಂದು ನ್ಯಾಯಾಲಯದ ಅಧಿಕಾರಿಗಳಿಗೆ ನಿರ್ದೇಶಿಸಿತು.

ABOUT THE AUTHOR

...view details