ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಮೂರನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ.ಕೊಡ್ಗಿ (93) ಅನಾರೋಗ್ಯದಿಂದ ಸೋಮವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇತರ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತಾಲೂಕು ಬೋರ್ಡ್ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದ ಕೊಡ್ಗಿ ಅವರು ಬೈಂದೂರು ಶಾಸಕರಾಗಿ, ನಂತರ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅನನ್ಯವಾದುದು. ಅವರ ರಾಜಕೀಯ ಜೀವನವೂ ಇತರರಿಗೆ ಮಾದರಿಯಾಗಿತ್ತು. ಪಕ್ಷದಲ್ಲಿ ಕರಾವಳಿ ಭಾಗದಲ್ಲಿ ಹಲವು ಯುವ ನಾಯಕರನ್ನು ಪ್ರೋತ್ಸಾಹಿಸಿ ಬೆಳೆಸಿದ ಶ್ರೇಯ ಇವರದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.