ಬೆಂಗಳೂರು: ಉಪಚುನಾವಣೆ ದಿನಾಂಕ ನಿಗದಿ ಆಗುತ್ತಿದ್ದಂತೆ ಕೆ ಆರ್ ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಪೈಪೋಟಿ ಮುಂದುವರಿದಿದೆ. ಕಾಂಗ್ರೆಸ್ ಹಿರಿಯ ಮುಖಂಡ ಡಿ ಕೆ ಮೋಹನ್ ಮತ್ತು ವಿಧಾನಪರಿಷತ್ ಸದಸ್ಯ ಎಂ. ನಾರಾಯಣಸ್ವಾಮಿ ನಡುವೆ ಟಿಕೆಟ್‌ಗಾಗಿ ಸ್ಪರ್ಧೆ ಏರ್ಪಟ್ಟಿದೆ. ಕೆ ಆರ್ ಪುರದಲ್ಲಿ ಮಾಜಿ ಸಚಿವ ಕೆ. ಜೆ. ಜಾರ್ಜ್ ನೇತೃತ್ವದಲ್ಲಿ ನಿನ್ನೆ ಟಿಕೆಟ್ ಆಕಾಂಕ್ಷಿಗಳು ಹಾಗೂ ಮುಖಂಡರ ಸಭೆ ನಡೆಸಲಾಯಿತು.
ಕೆ ಆರ್ ಪುರ ಕೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಪೈಪೋಟಿ
ಕಾಂಗ್ರೆಸ್ ಹಿರಿಯ ಮುಖಂಡ ಡಿಕೆ ಮೋಹನ್ ಮತ್ತು ವಿಧಾನಪರಿಷತ್ ಸದಸ್ಯ ಎಂ. ನಾರಾಯಣಸ್ವಾಮಿ ನಡುವೆ ಟಿಕೆಟ್‌ಗಾಗಿ ಪೈಪೋಟಿ ಏರ್ಪಟ್ಟಿದೆ. ಈ ಸಂಬಂಧ ಕೆ ಆರ್ ಪುರದಲ್ಲಿ ಮಾಜಿ ಸಚಿವ ಕೆ. ಜೆ. ಜಾರ್ಜ್ ನೇತೃತ್ವದಲ್ಲಿ ಟಿಕೆಟ್ ಆಕಾಂಕ್ಷಿಗಳು ಹಾಗೂ ಮುಖಂಡರ ಸಭೆ ನಡೆಸಲಾಗಿದೆ.
ಈ ಸಭೆಯಲ್ಲಿ ನಗರಸಭಾ ಮಾಜಿ ಅಧ್ಯಕ್ಷ ಡಿ ಕೆ ಮೋಹನ್ ಬಾಬು ತಮಗೆ ಟಿಕೆಟ್ ನೀಡುವಂತೆ ಮಾಜಿ ಸಚಿವ ಜಾರ್ಜ್ ಮುಂದೆ ವಿಷಯ ಪ್ರಸ್ತಾಪಿಸಿದರು. ಕ್ಷೇತ್ರದಲ್ಲಿ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿದ್ದೇನೆ. ನಮ್ಮ ದೊಡ್ಡಪ್ಪ ಮಾಜಿ ಸಚಿವ ಎ ಕೃಷ್ಣಪ್ಪ ಅವರಿಗೆ ಟಿಕೆಟ್ ತಪ್ಪಿಸಿ, ಬೈರತಿ ಬಸವರಾಜ್ ಅವರಿಗೆ ಟಿಕೆಟ್ ನೀಡಿದ್ದ ವೇಳೆ ಎ. ಕೃಷ್ಣಪ್ಪ ಅವರು ಕಾಂಗ್ರೆಸ್ ಬಿಟ್ಟ ನಂತರವೂ ಪಕ್ಷದ ಮೇಲಿನ ನಿಷ್ಠೆಯಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬಂದಿದ್ದೇವೆ. ಎಂಎಲ್‌ಸಿ ಸ್ಥಾನ ನೀಡುತ್ತೇವೆ ಎಂದು ಭರವಸೆ ನೀಡಲಾಗಿತ್ತು. ಆದರೆ ಕೆ.ಆರ್. ಪುರ ಹಾಗೂ ಪೂರ್ವ ತಾಲೂಕು ವ್ಯಾಪ್ತಿಯಲ್ಲಿ ಒಕ್ಕಲಿಗರ ಪ್ರಾಬಲ್ಯವಿದೆ ಎಂದು ನಾರಾಯಣ ಸ್ವಾಮಿಯವರಿಗೆ ವಿಧಾನ ಪರಿಷತ್ ಸ್ಥಾನ ನೀಡಿ ನನಗೆ ವಂಚಿಸಲಾಗಿದೆ. ಈ ಭಾಗದಲ್ಲಿ ಹಿಂದುಳಿದ ಯಾದವ ಸಮುದಾಯದವರು ಹೆಚ್ಚಿದ್ದಾರೆ. ನನಗೆ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಡಿ ಕೆ ಮೋಹನ್ ಆಗ್ರಹಿಸಿದರು.
ನಂತರ ಮಾತನಾಡಿದ ಕೆ.ಜೆ. ಜಾರ್ಜ್ ಕೆ.ಆರ್. ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷ ಸಂಘಟನೆಗೆ ಒತ್ತು ನೀಡಲು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದರು.