ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಆರ್.ದಿಲೀಪ್ ಹೃದಯಾಘಾತದಿಂದ ಇಂದು ಕೊನೆಯುಸಿರೆಳೆದಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಯಲ್ಲಿ ಅವರು ನಿಧನರಾದರು. ಇತ್ತೀಚೆಗೆ ಲಿವರ್ನಲ್ಲಿ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆದು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಹೃದಯಾಘಾತದಿಂದ ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಆರ್.ದಿಲೀಪ್ ಸಾವು
ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಹಿರಿಯ IPS ಅಧಿಕಾರಿ ಆರ್.ದಿಲೀಪ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ.
ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಆರ್.ದಿಲೀಪ್
ಕೆಲವು ದಿನಗಳ ಹಿಂದೆ ದಿಲೀಪ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂದು ಚಿಕಿತ್ಸೆ ಪಡೆಯುವಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತಿದ್ದರು. ಈ ಹಿಂದೆ ಹುಬ್ಬಳಿ-ಧಾರವಾಡ ಪೊಲೀಸ್ ಕಮೀಷನರ್ ಆಗಿ ಸೇವೆ ಸಲ್ಲಿಸಿದ್ದರು.