ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದಲ್ಲಿ ಜು. 5ರಂದು ನಡೆದಿದ್ದ ಕೊಲಿಜಿಯಂ ಸಭೆಯಲ್ಲಿ ಅಲೋಕ್ ಆರಾಧೆ ಅವರ ಹೆಸರನ್ನು ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಲಾಗಿತ್ತು.