ಕರ್ನಾಟಕ

karnataka

ETV Bharat / state

ನ್ಯಾ. ಬಿ ವಿ ನಾಗರತ್ನ ಸೇರಿ 9 ಮಂದಿ ಸುಪ್ರೀಂ ಜಸ್ಟೀಸ್​​​​​​​ಗಳಾಗಿ ನೇಮಕ ಮಾಡಿ ರಾಷ್ಟ್ರಪತಿ ಆದೇಶ - ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ

2003ರ ಆಗಸ್ಟ್ 28ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಎ.ಎಸ್ ಓಕ ಅವರು, 2019ರ ಮೇ 10ರಂದು ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ನಿಯೋಜನೆಗೊಂಡಿದ್ದರು. 2 ವರ್ಷಗಳಿಗೂ ಅಧಿಕ ಸೇವೆ ಸಲ್ಲಿಸಿದ ನಂತರ ಇದೀಗ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

senior-justice-bv-nagaratna-and-8-others-appointed-as-supreme-court-justices
ಸಿಜೆ ಎ.ಎಸ್ ಓಕ ಸುಪ್ರೀಂಕೋರ್ಟ್​ಗೆ ನೇಮಿಸಿ ರಾಷ್ಟ್ರಪತಿ ಆದೇಶ

By

Published : Aug 26, 2021, 3:54 PM IST

ಬೆಂಗಳೂರು:ರಾಜ್ಯ ಹೈಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ, ಹಿರಿಯ ನ್ಯಾಯಮೂರ್ತಿ ಬಿ.ವಿ ನಾಗರತ್ನ ಹಾಗೂ ಇತರ ಹೈಕೋರ್ಟ್​ಗಳ ನ್ಯಾಯಮೂರ್ತಿಗಳು ಸೇರಿದಂತೆ ಒಟ್ಟು 9 ನ್ಯಾಯಮೂರ್ತಿಗಳನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.

ಭಾರತದ ಸಂವಿಧಾನದ ವಿಧಿ 124 ರ ಕ್ಲಾಸ್ (2) ರ ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ರಾಷ್ಟ್ರಪತಿಗಳು ನ್ಯಾಯಮೂರ್ತಿಗಳನ್ನು ಸುಪ್ರೀಂಕೋರ್ಟ್​ಗೆ ನೇಮಕ ಮಾಡಿದ್ದಾರೆ. ಈ ಕುರಿತು ಇಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ನೂತನ ನ್ಯಾಯಮೂರ್ತಿಗಳು ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಈ ಆದೇಶ ಅನ್ವಯಿಸಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕನ್ನಡತಿ ಹಾಗೂ ಹಿರಿಯ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರು 2008ರ ಫೆಬ್ರವರಿ 18ರಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಸುದೀರ್ಘ 13 ವರ್ಷಗಳಿಗೂ ಹೆಚ್ಚು ಸಮಯ ಹೈಕೋರ್ಟ್ ನಲ್ಲಿ ಸೇವೆ ಸಲ್ಲಿಸಿರುವ ಇವರನ್ನು ಸುಪ್ರೀಂಕೋರ್ಟ್​​ ನ್ಯಾಯಮೂರ್ತಿ ಹುದ್ದೆಗೆ ನಿಯೋಜಿಸಲಾಗಿದೆ. ಈಗಿರುವ ಎಲ್ಲ ನ್ಯಾಯಮೂರ್ತಿಗಳ ಸೇವಾವಧಿ ಆಧಾರದಲ್ಲಿ 2027ರ ವೇಳೆಗೆ ಕನ್ನಡತಿಯೊಬ್ಬರು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ ಎನ್ನಲಾಗಿದೆ.

2003ರ ಆಗಸ್ಟ್ 28ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಎ.ಎಸ್ ಓಕ ಅವರು, 2019ರ ಮೇ 10ರಂದು ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ನಿಯೋಜನೆಗೊಂಡಿದ್ದರು. 2 ವರ್ಷಗಳಿಗೂ ಅಧಿಕ ಸೇವೆ ಸಲ್ಲಿಸಿದ ನಂತರ ಇದೀಗ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ಇದನ್ನೂ ಓದಿ:ಕೇಂದ್ರ ಸಚಿವ ನಾರಾಯಣ್‌ ರಾಣೆ ತಲೆ ಕಡಿದರೆ 51 ಲಕ್ಷ ರೂ.ಬಹುಮಾನ: ವಿಶ್ವ ಹಿಂದೂ ಸೇನಾ ರಾಷ್ಟ್ರೀಯ ಅಧ್ಯಕ್ಷರ ಘೋಷಣೆ

ABOUT THE AUTHOR

...view details