ಬೆಂಗಳೂರು: ನಗರದ ಐದು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಗೆ ಮೂಲ ಕಾಂಗ್ರೆಸಿಗರು ಗೈರಾಗಿದ್ದಾರೆ.
ಉಪಚುನಾವಣೆಯ ಪೂರ್ವಸಿದ್ಧತಾ ಸಭೆಗೆ ಕಾಂಗ್ರೆಸ್ ಹಿರಿಯ ನಾಯಕರೇ ಗೈರು! - ಲೆಟೆಸ್ಟ್ ಬೆಂಗಳೂರು ನ್ಯೂಸ್
ಬೆಂಗಳೂರಿನ ಐದು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಗೆ ಮೂಲ ಕಾಂಗ್ರೆಸಿಗರು ಗೈರಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಉಪಚುನಾವಣೆ ಸಭೆಗೆ ರಾಜ್ಯಸಭೆ ಸದಸ್ಯರು, ಸಂಸದರು, ಹಿರಿಯ ಮುಖಂಡರು, ಶಾಸಕರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಹಿರಿಯ ನಾಯಕರ ಸಭೆಯಲ್ಲಿ ಮೂಲ ಕಾಂಗ್ರೆಸಿಗರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಮಾಜಿ ಡಿಸಿಎಂ ಜಿ.ಪರಮೇಶ್ವರ್ ಬಣದ ಬಹುತೇಕರು ಸಭೆಗೆ ಹಾಜರಾಗಿರಲಿಲ್ಲ. ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಡಿ.ಕೆ. ಶಿವಕುಮಾರ್, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಸಂಸದ ಡಿ.ಕೆ. ಸುರೇಶ್, ಮಾಜಿ ಸಚಿವ ರಾಮಲಿಂಗಾರೆಡ್ಡಿ, ವೀರಪ್ಪ ಮೊಯ್ಲಿ ಮತ್ತು ಬಿ.ಕೆ. ಹರಿಪ್ರಸಾದ್ ಸಭೆಯಲ್ಲಿ ಕಾಣಿಸಿಕೊಳ್ಳಲಿಲ್ಲ.
ಈ ಮೂಲಕ ರಾಜ್ಯ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಅನುಮಾನ ಮೂಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸುತ್ತಿರುವ ಹಿನ್ನೆಲೆ ಮೂಲ ಕಾಂಗ್ರೆಸಿಗರು ಗೈರಾಗಿದ್ದಾರೆ ಎನ್ನಲಾಗ್ತಿದೆ. ಕಾಂಗ್ರೆಸ್ ಹಿರಿಯ ಮುಖಂಡ ಹೆಚ್.ಕೆ.ಪಾಟೀಲ್ ಸಭೆಯಲ್ಲಿ ಭಾಗಿಯಾಗಿದ್ದು ಬಿಟ್ಟರೆ ಬೇರೆ ಉಳಿದ ಹಿರಿಯ ಮುಖಂಡರು ಸಭೆಯತ್ತ ಮುಖ ಮಾಡಿಲ್ಲ.