ಕರ್ನಾಟಕ

karnataka

ETV Bharat / state

ನಾಡೋಜ ಪ್ರಶಸ್ತಿ ಪುರಸ್ಕೃತ ಮೊದಲ ಮಹಿಳಾ ಸಾಹಿತಿ ಗೀತಾ ನಾಗಭೂಷಣ ಇನ್ನಿಲ್ಲ - .Senior Literature Geeta Nagabhushana

ಗೀತಾ ನಾಗಭೂಷಣ ಅವರು ನಾಡೋಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಇಹಲೋಕ ತ್ಯಜಿಸಿದ ಹಿರಿಯ ಸಾಹಿತಿ ಗೀತಾ ನಾಗಭೂಷಣ
ಇಹಲೋಕ ತ್ಯಜಿಸಿದ ಹಿರಿಯ ಸಾಹಿತಿ ಗೀತಾ ನಾಗಭೂಷಣ

By

Published : Jun 28, 2020, 11:43 PM IST

Updated : Jun 28, 2020, 11:48 PM IST

ಬೆಂಗಳೂರು: ನಾಡೋಜ ಪ್ರಶಸ್ತಿಗೆ ಪಾತ್ರರಾದ ಮೊದಲ ಮಹಿಳಾ ಸಾಹಿತಿ ಗೀತಾ ನಾಗಭೂಷಣ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಇವರಿಗೆ 78 ವರ್ಷ ವಯಸ್ಸಾಗಿತ್ತು.

ಇಹಲೋಕ ತ್ಯಜಿಸಿದ ಹಿರಿಯ ಸಾಹಿತಿ ಗೀತಾ ನಾಗಭೂಷಣ

ಕಲಬುರಗಿ ನಗರದ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದ ಗೀತಾ ನಾಗಭೂಷಣ ನಾಡೋಜ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತೆಯಾಗಿದ್ದರು. 2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಗೀತಾ ನಾಗಭೂಷಣ ಅವರು ನಾಡೋಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಇವರ 'ಬದುಕು' ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇವರದೆ.

Last Updated : Jun 28, 2020, 11:48 PM IST

ABOUT THE AUTHOR

...view details