ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ನೇಮಕಾತಿ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸಿ ಇತ್ತೀಚೆಗೆ ವರ್ಗಾವಣೆಗೊಂಡಿದ್ದ ಅಧಿಕಾರಿಯೊಬ್ಬರನ್ನು ಸಿಐಡಿ ತನಿಖಾಧಿಕಾರಿಗಳು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಅವರು ರಾಜ್ಯ ಆಂತರಿಕ ಭದ್ರತಾ ವಿಭಾಗ (ಐಎಸ್ಡಿ)ದಲ್ಲಿ ಅವರು ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಆ ಅಧಿಕಾರಿಗೆ ನೋಟಿಸ್ ಜಾರಿ ಮಾಡಿತ್ತು. ಇದರಂತೆ ಹಾಜರಾದ ಅವರನ್ನು ಬಂಧಿಸಲಾಗಿದ್ದು, ಅವರು ಬಳಸುತ್ತಿದ್ದ ಮೊಬೈಲ್ನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.