ಬೆಂಗಳೂರು: ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಅಪಘಾತ ಎಸಗಿದ ಚಾಲಕನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ತಡರಾತ್ರಿ ಬಿಟಿಎಂ ಲೇಔಟ್ ಎರಡನೇ ಹಂತದಲ್ಲಿ ನಡೆದಿದೆ. ಅಪಘಾತ ಎಸಗಿದ ವ್ಯಕ್ತಿಯನ್ನು ವಾಸು ಎಂದು ಗುರುತಿಸಲಾಗಿದೆ.
ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದ ವಾಸು, ಮೂರು ದ್ವಿಚಕ್ರ ವಾಹನ ಹಾಗೂ ಇನ್ನೊಂದು ಕಾರಿ ಡಿಕ್ಕಿ ಹೊಡೆದಿದ್ದಾನೆ. ಅಡ್ಡಾದಿಡ್ಡಿ ಕಾರು ಚಲಾಯಿಸಿದ ವ್ಯಕ್ತಿಯನ್ನು ತಡೆದು ವಿಚಾರಿಸಿದಾಗ, ಆತ ಮದ್ಯದ ಅಮಲಿನಲ್ಲಿ ವಾಹನ ಚಾಲನೆ ಮಾಡಿರುವುದು ತಿಳಿದು ಬಂದಿದೆ. ಇದರಿಂದ ಸಿಟ್ಟಿಗೆದ್ದ ಸಾರ್ವಜನಿಕರು ಚಾಲಕ ವಾಸುಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಆತನನ್ನು ಮೈಕೋಲೇಔಟ್ ಸಂಚಾರಿ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ. ವೃದ್ಧ ದಂಪತಿಗೆ ಸೇರಿದ ಕಾರಿನ ಚಾಲಕನಾಗಿ ಕೆಲಸ ಮಾಡುತ್ತಿದ್ದ ವಾಸು, ಕಾರ್ಯಕ್ರಮ ಮುಗಿಸಿ ಮನೆಗೆ ಹೋಗುವಾಗ ಅಪಘಾತ ಎಸಗಿರುವಿದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.
ಬಸ್ - ಟಾಟಾ ಸುಮೋ ನಡುವೆ ಅಪಘಾತ.. ಏಳು ಮಂದಿ ಸಾವು :ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ಕಾರು ಮತ್ತು ಬಸ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಅಸ್ಸೋಂ ಮೂಲದವರು ಎಂದು ಹೇಳಲಾಗಿದೆ. ಈ ಯಾತ್ರಾರ್ಥಿಗಳು ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಸ್ಥಾನದಲ್ಲಿ ದರ್ಶನ ಮುಗಿಸಿ ಹಿಂತಿರುಗುವಾಗ ಅಪಘಾತದ ಸಂಭವಿಸಿದೆ. ಇವರೆಲ್ಲ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.