ಬೆಂಗಳೂರು:ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಸ ಪತ್ರಿಕೆ ಸಂಪಾದಕ ರೌಡಿ ಶೀಟರ್ ಅನಿಲ್ ರಾಜ್ ಎಂಬಾತನನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಂಪಾದಕ ಮಹಿಳೆಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಎಂದು ತಿಳಿದುಬಂದಿದೆ. ಈತನಿಗೆ 20 ವರ್ಷದ ಮಗಳಿದ್ದರೂ ತನ್ನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಂದಿಗೆ ಬಲವಂತವಾಗಿ ಸಂಬಂಧ ಬೆಳೆಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.