ಕರ್ನಾಟಕ

karnataka

ETV Bharat / state

ಸಚಿವ ಜಾರಕಿಹೊಳಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಕಬ್ಬನ್ ಪಾರ್ಕ್ ಠಾಣೆಗೆ ಪ್ರಕರಣ ವರ್ಗಾವಣೆ

Complaint against Ramesh Jarakiholi
ಸಚಿವ ಜಾರಕಿಹೊಳಿ

By

Published : Mar 2, 2021, 6:54 PM IST

Updated : Mar 2, 2021, 7:38 PM IST

18:47 March 02

ಸಚಿವ ಜಾರಕಿಹೊಳಿ ಅವರು ಕೆಲಸ ಆಮಿಷ ತೋರಿಸಿ ಯುವತಿವೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಆರೋಪ ಪ್ರಕರಣ ಕಬ್ಬನ್ ಪಾರ್ಕ್ ಠಾಣೆಗೆ ವರ್ಗಾವಣೆ ಆಗಿದೆ. ಮಾಹಿತಿ ಹಕ್ಕು ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ಈ ಕುರಿತು ದೂರನ್ನು ನೀಡಿದ್ದಾರೆ.

ಮಾಹಿತಿ ಹಕ್ಕು ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ

ಬೆಂಗಳೂರು : ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗಗೊಂಡಿದ್ದು, ಸಂತ್ರಸ್ತೆ ಪರ ಮಾಹಿತಿ ಹಕ್ಕು ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿರುವ ದೂರನ್ನು ಕಬ್ಬನ್ ಪಾರ್ಕ್ ಠಾಣೆಗೆ ವರ್ಗಾಯಿಸಲಾಗಿದೆ.

ದೂರು ಸಲ್ಲಿಕೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ ಅವರು, ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದೇವೆ. ನಮ್ಮ ದೂರನ್ನು ಪರಿಶೀಲನೆ ಮಾಡಿ ಪ್ರಕರಣವನ್ನು ಕಬ್ಬನ್ ಪಾರ್ಕ್ ಠಾಣೆಗೆ ವರ್ಗಾಯಿಸಿದ್ದಾರೆ. ಅಲ್ಲಿ ಮತ್ತೆ ದೂರು ನೀಡುವುದಾಗಿ ಹೇಳಿದರು.

ಇದು ಸೂಕ್ಷ್ಮ ವಿಚಾರ, ಮಹಿಳೆಯ ವಿವರ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಅವರ ಕುಟುಂಬ ಸದಸ್ಯರು ನನ್ನನ್ನು ಸಂಪರ್ಕಿಸಿದ್ದಾರೆ. ಅವರು ಹೋರಾಟ ಮಾಡಲು ಶಕ್ತರಲ್ಲ, ಹಾಗಾಗಿ ನನ್ನ ನೆರವು ಕೋರಿದ್ದಾರೆ. ಸಂತ್ರಸ್ತೆಯ ಕಟುಂಬ ಸದಸ್ಯರು ನಿನ್ನೆ ರಾಸಲೀಲೆಯ ಸಿಡಿ ಕೊಟ್ಟಿದ್ದರು. ಸರ್ಕಾರಿ ಉದ್ಯೋಗ‌ ಕೊಡಿಸುವುದಾಗಿ ಹೇಳಿ ಸಚಿವರು ಲೈಂಗಿಕ ಕಿರುಕುಳ ನೀಡಿದ್ದಾರೆ. ನ್ಯಾಯ ದೊರಕಿಸಿಕೊಡಿ ಎಂದು ಕೇಳಿದ್ದರು. ನಮ್ಮ ವಕೀಲರ‌ ಜೊತೆ ಚರ್ಚಿಸಿ ಸಿಡಿ, ದಾಖಲೆ ಇರಿಸಿಕೊಂಡು ಸತ್ಯಾಸತ್ಯತೆ ಗೊತ್ತಾಗಲಿ, ತನಿಖೆಯಾಗಲಿ ಎಂದು ದೂರು ನೀಡಿದ್ದೇನೆ ಎಂದರು. 

ಓದಿ : ಸಂಚಲನ ಸೃಷ್ಟಿಸಿದ ರಾಜ್ಯ ಸಚಿವರ ಸಿಡಿ ಪ್ರಕರಣ; ಪೊಲೀಸರಿಗೆ ದೂರು ನೀಡಲು ಮುಂದಾದ RTI ಕಾರ್ಯಕರ್ತ

ದೂರಿನಲ್ಲೇನಿದೆ..? 'ಹಾಲಿ ಸಚಿವ ರಮೇಶ್ ಜಾರಕಿಹೊಳಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಉತ್ತರ ಕರ್ನಾಟಕದ ಯುವತಿಯೊಬ್ಬರು ಆರ್.ಟಿ ನಗರದಲ್ಲಿ ವಾಸವಿದ್ದು, ಕಿರುಚಿತ್ರ ನಿರ್ಮಾಣಕ್ಕೆ ಬಂದಾಗ ಕೆಪಿಟಿಸಿಎಲ್​ನಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ನಂತರ ಉದ್ಯೋಗವನ್ನೂ ನೀಡದೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಇದರ ವಿಡಿಯೋ ಇದೆ ಎಂದಾಗ ಜೀವ ಬೆದರಿಕೆ ಹಾಕಿದ್ದಾರೆ. ಹಾಗಾಗಿ ಪ್ರಕರಣದ ತನಿಖೆ ನಡೆಸಬೇಕು ಮತ್ತು ಸಂತ್ರಸ್ತೆಯ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು' ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

Last Updated : Mar 2, 2021, 7:38 PM IST

ABOUT THE AUTHOR

...view details